Latest

ಗಾಯಕ ಸಿಧು ಹತ್ಯೆ ಪ್ರಕರಣ; ಇಬ್ಬರು ಪ್ರಮುಖ ಆರೋಪಿಗಳ ಎನ್ ಕೌಂಟರ್

ಪ್ರಗತಿವಾಹಿನಿ ಸುದ್ದಿ; ಚಂಡೀಘಡ: ಪಂಜಾಬಿ ಖ್ಯಾತ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ಎನ್ ಕೌಂಟರ್ ಮಾಡಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.

ಪಾಕಿಸ್ತಾನ ಗಡಿ ಬಳಿಯ ಅಟ್ಟಾರಿ ಬಾರ್ಡ್ ರ್ ಬಳಿ ಇಬ್ಬರು ಆರೋಪಿಗಳು ಅಡಗಿರುವ ಬಗ್ಗೆ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಆರೋಪಿಗಳ ಬಂಧನಕ್ಕೆ ಧಾವಿಸಿದ್ದ ಪೊಲೀಸರ ಮೇಲೆ ಆರೋಪಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿ ದಾಳಿ ನಡೆಸಿದ್ದು, ಆರೋಪಿಗಳ ಮೇಲೆ ಫೈರಿಂಗ್ ಮಾಡಿದ್ದಾರೆ. ಎನ್ ಕೌಂಟರ್ ನಲ್ಲಿ ಇಬ್ಬರು ಆರೋಪಿಗಳು ಮೃತಪಟ್ಟಿದ್ದಾರೆ.

ಆರೋಪಿಗಳಾದ ಶಾರ್ಪ್ ಶೂಟರ್ ಜಗರೂಪ್ ರೂಪಾ, ಮನ್ ಪ್ರೀತ್ ಎನ್ ಕೌಂಟರ್ ನಲ್ಲಿ ಹತರಾಗಿದ್ದಾರೆ. ಇನ್ನು ಗುಂಡಿನ ದಾಳಿಯಲ್ಲಿ ಮೂವರು ಪೊಲೀಸ್ ಸಿಬ್ಬಂದಿಗಳು ಹಾಗೂ ಓರ್ವ ಪತ್ರಕರ್ತ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ತಮ್ಮನನ್ನೇ ಹತ್ಯೆಗೈದ ಅಣ್ಣ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button