Politics

*ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೊಂದು ಸಂಕಷ್ಟ*

ಪ್ರಗತಿವಾಹಿನಿ ಸುದ್ದಿ: ಚೆಕ್ ಬೌನ್ಸ್ ಕೇಸ್ ನಲ್ಲಿ ಕೋರ್ಟ್ ಶಿಕ್ಷೆ ಪ್ರಕಟಿಸಿದ ಬೆನ್ನಲ್ಲೇ ಮಾಜಿ ಸಚಿವ ಬಿ.ನಾಗೇಂದ್ರಗೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಇಡಿ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಈ ಮೂಲಕ ನಾಗೇಂದ್ರಗೆ ಮತ್ತೆ ಇಡಿ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಇಡಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿತ್ತು. ಶನಿವಾರ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button