National

*ಹಳಿತಪ್ಪಿದ ಸಿಕಂದರಾಬಾದ್-ಶಾಲಿಮಾರ್ ಎಕ್ಸ್ ಪ್ರೆಸ್ ರೈಲು*

ಪ್ರಗತಿವಾಹಿನಿ ಸುದ್ದಿ: ಸಿಕಂದರಾಬಾದ್-ಶಾಲಿಮಾರ್ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನ ಮೂರು ಬೋಗಿಗಳು ಹಳಿತಪ್ಪಿ ಅವಗಢ ಸಂಭವಿಸಿದೆ.

ಪಶ್ಚಿಮ ಬಂಗಾಳದ ಹೌರಾ ಬಳಿ ಈ ಘಟನೆ ನಡೆದಿದೆ. ಕೋಲ್ಕತ್ತಾದಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ನಲ್ಪುರದಲ್ಲಿ ಸಾಪ್ತಾಹಿಕ ವಿಶೇಷ ರೈಲು ಹಳಿ ತಪ್ಪಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇಂದು ಬೆಳಿಗ್ಗೆ 5:31ರ ಸುಮಾರಿಗೆ ಈ ಘಟನೆ ನಡೆದಿದೆ. ರೈಲಿನ ಪಾರ್ಸಲ್ ವ್ಯಾನ್ ಹಾಗೂ ಎರಡು ಕೋಚ್ ಗಳು ಹಳಿ ತಪಿವೆ. ಪ್ರಯಾಣಿಕರ ಸ್ಥಳಾಂತರಕ್ಕೆ ಬಸ್ ವ್ಯವಸ್ಥೆ ಮಾಡಲಾಗಿದೆ. ಘಟನಾಸ್ಥಳಕ್ಕೆ ಪೊಲೀಸರು, ರೈಲ್ವೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button