Kannada NewsKarnataka NewsLatest

*ಪ್ರೊಫೆಸರ್ ನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ*

ಪ್ರಗತಿವಾಹಿನಿ ಸುದ್ದಿ: ಪ್ರೊಫೆಸರ್ ಓರ್ವರು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀರುವ ಘಟನೆ ಶಿವಮೊಗ್ಗದ ಸಿಮ್ಸ್ ಕಾಲೇಜಿನಲ್ಲಿ ನಡೆದಿದೆ.

ಆರೋಪಿ ಪ್ರೊಫೆಸರ್ ಬಂಧನಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಕಾಲೇಜು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗದ ಸಿಮ್ಸ್ ಕಾಲೇಜು ಪ್ರೊಪೆಸರ್ ಡಾ.ಅಶಿವ್ನ್ ಹೆಬ್ಬಾರ್ ವಿರುದ್ಧ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.

ಸಂತ್ರಸ್ತ ವಿದ್ಯಾರ್ಥಿನಿ ಶಿವಮೊಗ್ಗ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್ ಐ ಆರ್ ದಾಖಲಾಗಿದೆ. ತನ್ನ ವಿರುದ್ಧ ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ಪ್ರೊಫೆಸರ್ ನಾಪತ್ತೆಯಾಗಿದ್ದಾನೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button