Film & EntertainmentLatest

*ಖ್ಯಾತ ಗಾಯಕಿ ಹುಟ್ಟುಹಬ್ಬದ ಪಾರ್ಟಿ ಮೇಲೆ ಪೊಲೀಸರ ದಾಳಿ*

ಪ್ರಗತಿವಾಹಿನಿ ಸುದ್ದಿ: ಕನ್ನಡ, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ತನ್ನ ಗಾಯನದಿಂದಲೇ ಖ್ಯಾತಿ ಪಡೆದಿರುವ ಮಂಗ್ಲಿ ಹುಟ್ಟು ಹಬ್ಬದ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಹೈದರಾಬಾದ್ ನ ಚೆವೆಲ್ಲ ತ್ರಿಪುರಾ ರೆಸಾರ್ಟ್ ನಲ್ಲಿ ಗಾಯಕಿ ಮಂಗ್ಲಿ ಅವರ ಹುಟ್ಟುಹಬ್ಬದ ಪಾರ್ಟಿ ಆಯೋಜಿಸಲಾಗಿತ್ತು. ತಡರಾತ್ರಿ ಪೊಲೀಸರು ಪಾರ್ಟಿ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಹಲವು ಮಾದಕ ವಸ್ತುಗಳು ಪತ್ತೆಯಾಗಿವೆ. ಡ್ರಗ್ಸ್ ಹಾಗೂ ಡ್ರಿಂಕ್ಸ್ ಸರಬರಾಜು ಮಾಡಲಾಗುತ್ತಿತ್ತು ಎಂಬ ಮಾಹಿತಿ ಮೇರೆಗೆ ಈ ದಾಳಿ ನಡೆದಿದೆ.

ಈ ವೇಳೆ ಪಾರ್ಟಿಯಲ್ಲಿ ಭಾಗಿಯಾಗಿದ್ದ ಹಲವರನ್ನು ವಶಕ್ಕೆ ಪಡೆದು ರಕ್ತದ ಮಾದರಿ ಪರೀಕ್ಷಿಸಲಾಗಿದೆ. ಈ ವೇಳೆ 9 ಜನರು ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ. ಪಾರ್ಟಿಯಲ್ಲಿ ವಿದೇಶಿ ಮದ್ಯ, ಇತರ ಮಾದಕ ವಸ್ತುಗಳು ಪತ್ತೆಯಾಗಿದ್ದು, ಅವುಗಳನ್ನು ಪೊಲಿಸರು ವಶಕ್ಕೆ ಪಡೆದಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button