Latest

*ಖ್ಯಾತ ಹಿನ್ನೆಲೆ ಗಾಯಕಿ ವಾಣಿ ಜಯರಾಂ ಅನುಮಾನಾಸ್ಪದ ಸಾವು*

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಪದ್ಮಭೂಷಣ ಪುರಸ್ಕೃತೆ, ಖ್ಯಾತ ಗಾಯಕಿ ವಾಣಿ ಜಯರಾಂ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ತಮಿಳುನಾಡಿನ ಚೆನ್ನೈನ ನಿವಾಸದಲ್ಲಿ ವಾಣಿ ಜಯರಾಂ ಅವರ ಶವ ಪತ್ತೆಯಾಗಿದ್ದು, ಸಾವಿನ ಬಗ್ಗೆ ಹಲವು ಅನುಮಾನ ವ್ಯಕ್ತವಾಗಿದೆ. ವಾಣಿಜಯರಾಂ ಅವರಿಗೆ 77 ವರ್ಷ ವಯಸ್ಸಾಗಿತ್ತು.

ಕನ್ನಡ, ತೆಲುಗು,ತಮಿಳು, ಹಿಂದಿ, ಮಲಯಾಳಂ ಸೇರಿದಂತೆ ಹಲವು ಭಾಷೆಗಳಲ್ಲಿ 10,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದ ವಾಣಿ ಜಯರಾಂ ಇದೀಗ ಶವವಾಗಿ ಪತ್ತೆಯಾಗಿರುವುದು ಚಿತ್ರರಂಗಕ್ಕೆ ಆಘಾತವನ್ನುಂಟುಮಾಡಿದೆ.

2023ರ ಗಣರಾಜ್ಯೋತ್ಸವದ ದಿನದಂದು ಭಾರತ ಸರ್ಕಾರ ವಾಣಿ ಜಯರಾಂ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು.

*ವಾಣಿ ಜಯರಾಮ್ ನಿಧನಕ್ಕೆ ಡಿ ಕೆ ಶಿವಕುಮಾರ್ ಸಂತಾಪ*

ಖ್ಯಾತ ಗಾಯಕಿ ವಾಣಿ ಜಯರಾಮ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ವಾಣಿ ಜಯರಾಮ್ ಅವರ ನಿಧನ ಬಹಳ ನೋವು ತಂದಿದೆ. ಕನ್ನಡ, ತೆಲುಗು, ತಮಿಳು ಸೇರಿದಂತೆ ಬಹುಭಾಷೆಗಳ ಹಿನ್ನೆಲೆ ಗಾಯಕಿಯಾಗಿದ್ದ ವಾಣಿ ಜಯರಾಮ್ ಅವರು 10 ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಅವರ ನಿಧನದಿಂದ ಚಿತ್ರರಂಗಕ್ಕೆ ತುಂಬಲಾರದ ಹಾನಿಯಾಗಿದೆ ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಾಣಿ ಜಯರಾಮ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು, ಬಂಧುಗಳು, ಸ್ನೇಹಿತರು ಹಾಗೂ ಅಭಿಮಾನಿಗಳಿಗೆ ದೇವರು ಕರುಣಿಸಲಿ ಎಂದು ಶಿವಕುಮಾರ್ ಅವರು ಶೋಕಸಂದೇಶದಲ್ಲಿ ತಿಳಿಸಿದ್ದಾರೆ.

*ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಮುಖ್ಯಂತ್ರಿಯಾಗುತ್ತೀರಿ ಎಂದು ಆಶಿರ್ವಾದ ಮಾಡಿದ ಜೈನ ಮುನಿ*

https://pragati.taskdun.com/lakshmana-savadicmjaina-muniathani/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button