Kannada NewsKarnataka NewsLatest

*SIRಗೆ ತೆರಳುತ್ತಿದ್ದಾಗ ಭೀಕರ ಅಪಘಾತದಲ್ಲಿ ಅಧಿಕಾರಿ ಸಾವು: ಡಿಸಿ ಕಚೇರಿ ಎದುರು ಕಂದಾಯ ಇಲಾಖೆ ನೌಕರರಿಂದ ಅಹೋರಾತ್ರಿ ಧರಣಿ*

ಪ್ರಗತಿವಾಹಿನಿ ಸುದ್ದಿ: ತುಮಕೂರು: ಎಸ್ ಐಆರ್ ಪ್ರಕ್ರಿಯೆಗೆ ತೆರಳುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿ ಗ್ರಾಮ ಆಡಳಿತಾಧಿಕಾರಿಯೊಬ್ಬರು ಮೃತಪಟ್ಟಿದ್ದು,ಇದರಿಂದ ರೊಚ್ಚಿಗೆದ್ದಿರುವ ಕಂದಾಯ ಇಲಾಖೆ ನೌಕರರು ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾವನಾ ಮೃತ ಅಧಿಕಾರಿ. ಕೆಲಸದ ಒತ್ತಡ ಮತ್ತು ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಕಂದಾಯ ಇಲಾಖೆ ನೌಕರರು ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಎಸ್‌ಐಆರ್ ಕರ್ತವ್ಯದ ನಿಮಿತ್ತ ಮುಂಜಾನೆ ಗಡಿಬಿಡಿಯಲ್ಲಿ ತೆರಳುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಗ್ರಾಮ ಆಡಳಿತ ಅಧಿಕಾರಿ ಭುವನಾ ಮೃತಪಟ್ಟಿದ್ದರು. ಆಕೆಯ ಸಾವಿಗೆ ನ್ಯಾಯ ಸಿಗಬೇಕು ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನೌಕರರು ಪ್ರತಿಭಟನೆ ಮುಂದುವರಿಸಿದ್ದಾರೆ.

Home add -Advt

ತಡರಾತ್ರಿ 11:15 ರ ಸುಮಾರಿಗೆ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಸುಮಾರು ಒಂದೂವರೆ ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಿದರಾದರೂ, ಸಂಧಾನ ಯಶಸ್ವಿಯಾಗಲಿಲ್ಲ. ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಕಂದಾಯ ನೌಕರರ ಸಂಘ ಪಟ್ಟು ಹಿಡಿದಿದೆ. ಇಂದು ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

Related Articles

Back to top button