Latest

ಶಶಿಕಲಾ ನಟರಾಜನ್ ಆಸ್ಪತ್ರೆಗೆ ದಾಖಲು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜನವರಿ 27ರಂದು ಶಶಿಕಲಾ ನಟರಾಜನ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಈ ನಡುವೆ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ಜೈಲಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಗತ್ಯವಿದ್ದರೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುವುದು ಎಂದು ಜೈಲಧಿಕಾರಿಗಳು ತಿಳಿಸಿದ್ದಾರೆ.

Home add -Advt

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿಕಲಾ ನಟರಾಜನ್, 2017ರಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜೈಲುಶಿಕ್ಷೆ ಜೊತೆ 10 ಕೋಟಿ ರೂ ದಂಡ ವಿಧಿಸಿದೆ. ದಂಡದ ಮೊತ್ತ ಪಾವತಿಸಿರುವ ಹಿನ್ನೆಲೆಯಲ್ಲಿ ಹಾಗೂ ಸನ್ನಡತೆ ಆಧಾರದಲ್ಲಿ ಶಶಿಕಲಾ ಅವರನ್ನು ಅವಧಿಗೂ ಮುನ್ನವೇ ಬಿಡುಗಡೆ ಮಾಡಲಾಗುತ್ತಿದೆ. ತಮಿಳುನಾಡು ವಿಧಾನಸಭಾ ಚುನಾವಣೆ ಬೆನ್ನಲ್ಲೇ ಶಶಿಕಲಾ ಬಿಡುಗಡೆ ಮಹತ್ವ ಪಡೆದುಕೊಂಡಿದೆ.

Related Articles

Back to top button