ಪ್ರಗತಿವಾಹಿನಿ ಸುದ್ದಿ; ತುಮಕೂರು: ಉಪಚುನಾವಣೆಯಲ್ಲಿ ಆರ್.ಆರ್.ನಗರ ಹಾಗೂ ಶಿರಾ ಎರಡೂ ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಭಾರಿಸಿದೆ. ಶಿರಾದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವಿನ ಮೂಲಕ ಇತಿಹಾಸ ಸೃಷ್ಟಿಸಿದೆ.
ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ 10 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಹಾಗೂ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮಾ ಸೋಲನುಭವಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ 66,599 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ನ ಟಿ.ಬಿ.ಜಯಚಂದ್ರ 55,825 ಮತಗಳನ್ನು ಪಡೆದುಕೊಂಡಿದ್ದಾರೆ. ಇನ್ನು ಜೆಡಿಎಸ್ ನ ಅಮ್ಮಾಜಮ್ಮಾ 30,507 ಮತಗಳನ್ನು ಪಡೆದಿದ್ದಾರೆ.
ಗಟ್ಟಿಯಾಯ್ತು ಯಡಿಯೂರಪ್ಪ ಖುರ್ಚಿ, ವಿಜಯೇಂದ್ರ ಉತ್ತರಾಧಿಕಾರಿತ್ವ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ