Latest

ಶಿರಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಾರಂತೆ ಬಿಗ್ ಬಾಸ್ ಸ್ಪರ್ಧಿ

ಪ್ರಗತಿವಾಹಿನಿ ಸುದ್ದಿ; ತುಮಕೂರು: ಉಪಚುನಾವಣೆ ಘೋಷಣೆಯಾದ ಬೆನ್ನಲ್ಲೇ ಶಿರಾ ಹಾಗೂ ಆರ್.ಆರ್ ನಗರ ಎರಡೂ ಕ್ಷೇತ್ರಗಳ ಅಖಾಡ ರಂಗೇರಿದ್ದು, ಇದೀಗ ಬಿಗ್ ಬಾಸ್ ಸ್ಪರ್ಧಿಯೊಬ್ಬರು ತಾವು ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ತಿಳಿಸಿದ್ದಾರೆ.

ಬಿಗ್ ಬಾಸ್ ಸೀಜನ್-4 ರನ್ನರ್ ಅಪ್ ಆಗಿದ್ದ ದಿವಾಕರ್, ತಾವು ಶಿರಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವುದಾಗಿ ಹೇಳಿದ್ದಾರೆ. ಆದರೆ ಯಾವ ಪಕ್ಷದಿಂದ ಸ್ಪರ್ಧಿಸಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ. ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆ ಚರ್ಚೆ ನಡೆದಿದೆ ಎಂದಿದ್ದಾರೆ.

Home add -Advt

ಶಿರಾ ಕ್ಷೇತ್ರದ ಜನತೆಗೆ ಸಹಾಯ ಮಾಡುವ ನಿಟ್ಟಿನಲ್ಲಿ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಯೋಚಿಸಿದ್ದು, ಈಗಾಗಲೇ ಜನರು ನನ್ನನ್ನು ತುಂಬಾ ಪ್ರೀತಿಯಿಂದ ಕಂಡಿದ್ದಾರೆ. ನಾನು ಚುನಾವಣೆಗೆ ನಿಂತರೆ ಜನರು ನನ್ನನ್ನು ಗೆಲ್ಲಿಸುತ್ತಾರೆ ಎಂಬ ನಂಬಿಕೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Related Articles

Back to top button