Kannada NewsKarnataka NewsLatest

*ಎಸ್‌ಐಆರ್ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಕುಸಿದು ಬಿದ್ದ ಅಂಗನವಾಡಿ ಕಾರ್ಯಕರ್ತೆ: ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ಎಸ್‌ಐಆರ್ ಕರ್ತವ್ಯ ನಿರ್ವಹಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೆವಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರತ್ನಮ್ಮ ಬಳಿಗಾರ (43) ಮೃತ ಮಹಿಳೆ. ಎಸ್‌ಐಆರ್ ಹಿನ್ನೆಲೆ ರತ್ನಮ್ಮ ಬಿಎಲ್‌ಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ ಗ್ರಾಮಕ್ಕೆ ಭೇಟಿ ಕೊಟ್ಟಿದ್ದರು. ಈ ವೇಳೆ ಎಸ್‌ಐಆರ್ ಪ್ರಗತಿ ಪರಿಶೀಲನೆ ನಡೆಸಿದ್ದರು. ಗ್ರಾಮದ ಮಹೇಶಗೌಡ ಪಾಟೀಲ ಎಂಬವರ ಮನೆಯಲ್ಲಿ ಶಾಸಕರು ಹಾಗೂ ಸಿಬ್ಬಂದಿಗೆ ಚಹಾ ವ್ಯವಸ್ಥೆ ಮಾಡಲಾಗಿತ್ತು. ಸಭೆ ಬಳಿಕ ಚಹಾ ಕುಡಿಯುವ ಸಂದರ್ಭ ರತ್ನಮ್ಮ ಕುಸಿದು ಬಿದ್ದಿದ್ದಾರೆ.

Home add -Advt

ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ರತ್ನಮ್ಮ ಮೃತಪಟ್ಟಿದ್ದಾರೆ. ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಗದಗ ಜಿಲ್ಲೆ ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Related Articles

Back to top button