
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಬೆಂಗಳೂರು: ರಾಜ್ಯದ ಶಿರಾ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರ ಸೇರಿದಂತೆ ದೇಶಾದ್ಯಂತ 56 ವಿಧಾನಸಭಾ ಕ್ಷೇತ್ರಗಳು ಹಾಗೂ ಒಂದು ಲೋಕಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ನವೆಂಬರ್ 3ರಂದು ಮತದಾನ ನಡೆಯಲಿದೆ.
ಈ ಕುರಿತು ಕೇಂದ್ರ ಚುನಾವಣಾ ಆಯೋಗ ಉಪಚುನಾವಣೆಗಳ ದಿನಾಂಕ ಪ್ರಕಟಿಸಿದ್ದು, ಶಿರಾ ಹಾಗೂ ಆರ್.ಆರ್ ನಗರ ಕ್ಷೇತ್ರಗಳಿಗೆ ನ.3ರಂದು ಚುನಾವಣೆ ನಡೆಯಲಿದೆ. ಅ.9ರಂದು ನಾಮಪತ್ರ ಸಲ್ಲಿಕೆಯಾರಂಭವಾಗಲಿದ್ದು, ಅ.16 ನಾಮಪತ್ರ ಸಲ್ಲಿಕೆಗೆ ಕೊನೆ ದಿನ. ಅ.17ರಂದು ಪರಿಶೀಲನೆ ನಡೆಯಲಿದ್ದು, ಅ.19 ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ ಎಂದು ತಿಳಿಸಿದೆ.
ಇನ್ನು ಕರ್ನಾಟಕ ವಿಧಾನಪರಿಷತ್ನ ಎರಡು ಪದವೀಧರ ಹಾಗೂ ಎರಡು ಶಿಕ್ಷಕ ಕ್ಷೇತ್ರಗಳು ಸೇರಿ ನಾಲ್ಕು ಸ್ಥಾನಗಳಿಗೆ ಅಕ್ಟೋಬರ್ 28ರಂದು ಚುನಾವಣೆ ನಡೆಯಲಿದೆ. ನವೆಂಬರ್ 2ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಅಕ್ಟೋಬರ್ 28ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ.