Kannada NewsKarnataka NewsLatestPolitics

*ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರ್ಬಳಕೆ ಆರೋಪ: ರಾಜ್ಯ ಚುನಾವಣಾ ಆಯುಕ್ತರಿಗೆ ಎನ್‌ಡಿಎ ನಿಯೋಗದಿಂದ ಸೋಮವಾರ ದೂರು*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಕರ್ನಾಟಕದಲ್ಲಿ ನಡೆಯುತ್ತಿರುವ SIR (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿರುವ ಎನ್‌ಡಿಎ ಮೈತ್ರಿಕೂಟ, ಈ ಸಂಬಂಧ ರಾಜ್ಯ ಚುನಾವಣಾ ಆಯುಕ್ತರಿಗೆ ಸೋಮವಾರ ದೂರು ಸಲ್ಲಿಸಲಿದೆ.

Home add -Advt


ಸೋಮವಾರ ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಕೆ.ಆರ್. ವೃತ್ತದ ಸಮೀಪದಲ್ಲಿರುವ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ಎನ್‌ಡಿಎ ನಿಯೋಗ ಭೇಟಿ ನೀಡಿ ದೂರು ಸಲ್ಲಿಸಲಿದ್ದು, ಎಸ್‌ಐಆರ್ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳು ಹಾಗೂ ಸರ್ಕಾರದ ಹಸ್ತಕ್ಷೇಪದ ಕುರಿತು ಆಯುಕ್ತರ ಗಮನ ಸೆಳೆಯಲಿದೆ.


ಜೆಡಿಎಸ್ ಪರವಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ, ವಿಧಾನ ಪರಿಷತ್ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಸ್.ಎಲ್. ಭೋಜೇಗೌಡ, ಲೋಕಸಭಾ ಸದಸ್ಯ ಎಂ. ಮಲ್ಲೇಶ್ ಬಾಬು ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಎ. ತಿಪ್ಪೇಸ್ವಾಮಿ ನಿಯೋಗದಲ್ಲಿ ಭಾಗವಹಿಸಲಿದ್ದಾರೆ.


ಬಿಜೆಪಿ ಪರವಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಕೇಂದ್ರ ಸಚಿವ ಶೋಭಾ ಕರಂದ್ಲಾಜೆ, ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ನಿಯೋಗದಲ್ಲಿರಲಿದ್ದಾರೆ.


ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವಂತೆ ಹಾಗೂ ಯಾವುದೇ ರೀತಿಯ ರಾಜಕೀಯ ದುರ್ಬಳಕೆ ನಡೆಯದಂತೆ ಕ್ರಮ ಕೈಗೊಳ್ಳುವಂತೆ ರಾಜ್ಯ ಚುನಾವಣಾ ಆಯೋಗವನ್ನು ಎನ್‌ಡಿಎ ನಾಯಕರು ಆಗ್ರಹಿಸಲಿದ್ದಾರೆ.

Related Articles

Back to top button