

ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಯ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಶಿರಸಿಯ ಚುನಾವಣೆ ವೀಕ್ಷಕರಾಗಿ ನೇಮಕಗೊಂಡಿರುವ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರನ್ನು ನೇಮಕ ಮಾಡಲಾಗಿದೆ.
ಭಾನುವಾರ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಶಿರಸಿಯ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯರ ನೇತೃತ್ವದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ್ದ ಚನ್ನರಾಜ ಹಟ್ಟಿಹೊಳಿ, ಚುನಾವಣೆಯ ರೂಪರೇಷೆ ಹಾಗೂ ಪಕ್ಷದ ಸಂಘಟನೆ ಕುರಿತಾಗಿ ಮಾತನಾಡಿದರು.
ಸಭೆಯಲ್ಲಿ ಶಾಸಕರಾದ ಭೀಮಣ್ಣ ನಾಯ್ಕ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸಾಯಿ ಗಾಂವಕರ್, ಶಿರಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ್ ಗೌಡ, ಬಸವರಾಜ ದೊಡಮನಿ, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷರಾದ ಸತೀಶ್ ನಾಯ್ಕ್, ಸುಮಾ ಉಗ್ರಾಣಕರ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ