ಶಿರಸಿ ಪೋಲೀಸರ ಭರ್ಜರಿ ಕಾರ್ಯಾಚರಣೆ

ಮಾರಕಾಸ್ತ್ರ ಹಿಡಿದು ಗ್ಯಾಂಗ್ ದರೋಡೆಗೆ ಸಜ್ಜಾಗಿದ್ದ ಯುವಕರ ಬಂಧನ”

ಪ್ರಗತಿವಾಹಿನಿ ಸುದ್ದಿ, ಶಿರಸಿ –

ಮಾರಕಾಸ್ತ್ರಗಳನ್ನು ಬಳಸಿಕೊಂಡು ದರೋಡೆ ನಡೆಸಲು ಹೊರಟಿದ್ದ ಯುವಕರ ಗ್ಯಾಂಗ್ ಒಂದನ್ನು ಶಿರಸಿ ಪೊಲೀಸರು ಬಂಧಿಸಿದ್ದು, ಅವರಿಂದ ದರೋಡೆಗೆ ಬಳಸುವ ವಸ್ತುಗಳು ಹಾಗೂ ಗಾಂಜಾ ವಶಪಡಿಸಿಕೊಂಡ ಘಟನೆ ಇಲ್ಲಿನ ಯಲ್ಲಾಪುರ ರಸ್ತೆಯ ಸಹ್ಯಾದ್ರಿ ತಗ್ಗಿನಲ್ಲಿ ನಡೆದಿದೆ.

Home add -Advt

ಇಲ್ಲಿನ ವಿದ್ಯಾ ನಗರದ ಮುರುಗೇಶ ಪೂಜಾರಿ (20), ಕಸ್ತೂರಬಾ ನಗರದ ಮಹಮ್ಮದ್ ಯಾಸೀನ್ (23), ಸವಣೂರಿನ ಮಯಾನಿ ಮೊಹಲ್ಲಾದ ಅಜ್ಮಿತ್ ಅಸ್ಲಾಂ (19), ಗುಲಾಮ್ ಮುಸ್ತಫಾ (19), ಗಾಂಧಿ ನಗರದ ಮರ್ದಾನ್ ಶಫಿಸಾಬ (19) ಹಾಗೂ ಮರಾಠಿಕೊಪ್ಪದ ಚರಣ್ ನಾಯ್ಕ (19) ಬಂಧಿತ ಆರೋಪಿಗಳಾಗಿದ್ದಾರೆ. ಇವರಲ್ಲಿ ಕೃತ್ಯದ ಮುಖ್ಯ ಆರೋಪಿಯಾಗಿದ್ದ ವಿದ್ಯಾ ನಗರದ ಮಂಜುನಾಥ ಅಲಿಯಾಸ್ ಮಿಂಟಾ ಮಾರುತಿ ಪೂಜಾರಿ ಪರಾರಿಯಾಗಿದ್ದಾನೆ‌.

ಇವರು ಮಾರಕಾಸ್ತ್ರಗಳಾದ ಬಡಿಗೆ, ರಾಡ್, ಖಾರದ ಪುಡಿ, ಚಾಕುವಿನೊಂದಿಗೆ ದರೋಡೆ ನಡೆಸಲು ಹೊಂಚು ಹಾಕುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಬಂಧಿಸಿದ್ದಾರೆ. ಇವರಿಂದ ಕೃತ್ಯಕ್ಕೆ ಬಳಸಲು ಇಟ್ಟುಕೊಂಡಿದ್ದ ವಸ್ತುಗಳು ಹಾಗೂ ಮೋಟಾರ ಸೈಕಲ್ ಮತ್ತು ಅಂದಾಜು 20 ಸಾವಿರ ಮೌಲ್ಯದ 912 ಗ್ರಾಂ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಡಿಎಸ್ಪಿ ಜಿ.ಟಿ.ನಾಯಕ, ಸಿಪಿಐ ಪ್ರದೀಪ ಮಾರ್ಗದರ್ಶನದಲ್ಲಿ ಶಿರಸಿ ಮಾರುಕಟ್ಟೆ ಠಾಣೆ ಪಿಎಸ್ಐ ನಾಗಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button