ಪ್ರಗತಿವಾಹಿನಿ ಸುದ್ದಿ, ಶಿರಸಿ : ತಾಲೂಕಿನ ಕೊಳಗಿಬೀಸ್ ಶ್ರೀ ಮಾರುತಿ ದೇವಸ್ಥಾನದ ಮಹಾದ್ವಾರ ಸಮರ್ಪಣೆ ಕಾರ್ಯಕ್ರಮ ಭಾನುವಾರ ನಡೆಯಿತು.
ವಿಧಾನ ಸಭೆಯ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಹಾದ್ವಾರ ಸಮರ್ಪಣೆ ಮಾಡಿ, ಮಹಾದಾನಿ ಶ್ರೀನಿವಾಸ ಹೆಬ್ಬಾರ್ ಅವರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಧ್ಯಾತ್ಮದ ತಳಹದಿ ಗಟ್ಟಿಗೊಂಡರೆ ಮಾತ್ರ ಧರ್ಮ ಗಟ್ಟಿಯಾಗುತ್ತದೆ. ಇದಕ್ಕೆ ಪೂರಕವಾಗಿ ದೇವಾಲಯಗಳು, ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕಿದೆ ಎಂದರು.
ದುಡಿದ ಸಂಪತ್ತಿನ ಸದ್ಬಳಕೆ ಆಗಬೇಕು. ಆ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕು ಎಂಬುದನ್ನು ಶ್ರೀನಿವಾಸ ಹೆಬ್ಬಾರ ಶಿರಸಾವಹಿಸಿ ಪಾಲಿಸುತ್ತಿದ್ದಾರೆ. ಕೊಳಗಿಬೀಸ್ ದೇವಾಲಯಕ್ಕೆ ಮಹಾದ್ವಾರ
ನಿರ್ಮಿಸಿ ಕೊಟ್ಟಿರುವುದು ಅವರ ಸೇವಾ ಕಾರ್ಯಕ್ಕೆ ಸಾಕ್ಷಿಯಾಗಿದೆ ಎಂದರು.
ಮಾಜಿ ಸಚಿವ ಆರ್.ವಿ.ದೇಶಪಾಂಡೆ ಮಾತನಾಡಿ, ಸಮಾಜದಲ್ಲಿ ಮೌಲ್ಯಗಳು ಕುಸಿಯುತ್ತಿರುವ ಸಂದರ್ಭದಲ್ಲಿ ಧಾರ್ಮಿಕ ಕೇಂದ್ರಗಳು, ಗುರುಹಿರಿಯರು, ಪಾಲಕರ ಬಗ್ಗೆ ಗೌರವ ಬೆಳೆಸಬೇಕಿದೆ ಎಂದು ಶಾಸಕ ಆರ್ ವಿ ದೇಶಪಾಂಡೆ ಹೇಳಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹಿರಿಯ ಪತ್ರಕರ್ತ, ವಿಸ್ತಾರ ಮೀಡಿಯಾ ಪ್ರಧಾನ ಸಂಪಾದಕ ಹರಿಪ್ರಕಾಶ್ ಕೋಣೆಮನೆ ಮಾತನಾಡಿ, ಕೆರೆಗಳ ಅಭಿವೃದ್ಧಿ ಮಾಡುವ ಮೂಲಕ ಶ್ರೀನಿವಾಸ ಹೆಬ್ಬಾರ್ ಅವರು ಉತ್ತರ ಕನ್ನಡದ ಜಿಲ್ಲೆಯಲ್ಲಿ ಅಷ್ಟೇ ಅಲ್ಲದೆ ದೇಶದಲ್ಲಿಯೇ ಚಿರಪರಿಚಿತರಾಗಿದ್ದಾರೆ ಎಂದು ಪ್ರಶಂಸಿಸಿದರು.
ನಾವು ನವ ಯುಗದ ಮಾಧ್ಯಮವನ್ನು ಕಟ್ಟಲು ಹೆಜ್ಜೆ ಇಟ್ಟಿದ್ದೇವೆ. ಈ ಮಾಧ್ಯಮದಿಂದ ಕರ್ನಾಟಕಕ್ಕೆ ಹಾಗೂ ಮಾಧ್ಯಮ ಜಗತ್ತಿಗೆ ಒಳ್ಳೆಯದಾಗುತ್ತದೆ. ನಾವು ಮಧ್ಯದಲ್ಲಿ ನಿಂತು ಉಳಿದವರನ್ನೆಲ್ಲ ಜೊತೆಗೆ ಕರೆದುಕೊಂಡು ಹೋಗುವ ಪ್ರಯತ್ನ ಮಾಡುತ್ತೇವೆ ಎಂದರು.
ಈ ವೇಳೆ ಉದ್ಯಮಿ ಎಚ್.ವಿ.ಧರ್ಮೇಶ, ಮಾರುತಿ ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಧರ ಹೆಗಡೆ ಇಳ್ಳುಮನೆ ಇತರರಿದ್ದರು.
ಮಳೆ ಹಾನಿ ನಿರ್ವಹಣೆಗೆ ಸಚಿವರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಿದ ಸಿಎಂ; ಇಲ್ಲಿದೆ ವಲಯವಾರು ಸಚಿವರ ಪಟ್ಟಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ