Kannada NewsKarnataka NewsLatest

*ಶಿರಸಿ: 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಶಿರಸಿ: ನಾಲ್ಕು ವರ್ಷದ ಬಾಲಕಿ ಮೇಲೆ ಯುವಕನೊಬ್ಬ ಅತ್ಯಾಚಾರವೆಸಗಿರುವ ಅಮಾನುಷ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.

ಆರೋಪಿಯನ್ನು ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೋಲಿಸರು ಬಂಧಿಸಿದ್ದು, ಬಂಧಿತನನ್ನು ಶಿವ ರಾಮಯ್ಯ (26 ) ಎಂದು ಗುರುತಿಸಲಾಗಿದೆ.

Home add -Advt

ಬಂಧಿತ ಆಂಧ್ರಪ್ರದೇಶದ ಕಡಪ ಜಿಲ್ಲೆಯ ರಾಯಚೂಟಿ ತಾಲೂಕಿನವನು. ಶಿರಸಿಯ ಇಂದಿರಾನಗರದಲ್ಲಿ ಕಳೆದ ಒಂದು ತಿಂಗಳಿಂದ ಕೂಲಿ ಕೆಲಸ ಮಾಡಿಕೊಂಡಿದ್ದ ಶಿವ ರಾಮಯ್ಯ, ಬಾಲಕಿ ಮೇಲೆ ಅತ್ಯಾಚಾರವೆಸಗಿ, ವೈರ್ ನಿಂದ ಕೊಲೆ ಮಾಡಲು ಪ್ರಯತ್ನಿಸಿದಾಗ ಮಗುವಿನ ಚೀರಾಟ ಕೇಳಿದ‌ ಅಕ್ಕಪಕ್ಕದ ಜನರು ಸ್ಥಳಕ್ಕೆ ಧಾವಿಸಿದ್ದಾರೆ. ಈ ವೇಳೆ ಪರಾರಿ ಯಾಗುತ್ತಿದ್ದ‌ ಆರೋಪಿಯನ್ನು ಸಾರ್ವಜನಿಕರ ಸಹಾಯದಿಂದ ಹಿಡಿದು ಮಾರುಕಟ್ಟೆ ಠಾಣೆಯ‌ ಪೊಲೀಸರು ಬಂಧಿಸಿದ್ದಾರೆ.

ಸಿಪಿಐ ರಾಮಚಂದ್ರ ನಾಯಕ, ಪಿಎಸ್ಐ ಭೀಮಾಶಂಕರ್, ಸಿಬ್ಬಂದಿಗಳು ಆರೋಪಿಯನ್ನು ಹಿಡಿದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Related Articles

Back to top button