ಪ್ರಗತಿವಾಹಿನಿ ಸುದ್ದಿ; ಶಿರಸಿ: ಕಟ್ಟಡ ನಿರ್ಮಾಣ ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ವೇಳೆ ಇಬ್ಬರು ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ನಡೆದಿದೆ.
ಶಿರಸಿಯ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಯದುನಂದನ್ ಮತ್ತು ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿ ಸುಬ್ರಹ್ಮಣ್ಯ ಬಂಧಿತ ಆರೋಪಿಗಳು.
ಗುತ್ತಿಗೆದಾರ ಸುನೀಲ್ ಎಂಬುವವರಿಂದ 12 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ದಾಳಿ ನಡೆಸಿ ಹಣದ ಸಮೇತ ಆರೋಪಿಗಳನ್ನು ಬಂಧಿಸಿದೆ. ಗುತ್ತಿಗೆದಾರನಿಗೆ 4 ಲಕ್ಷಗಳ ಬಿಲ್ ಮಾಡಿಕೊಡಲು ಲಂಚದ ಬೇಡಿಕೆ ಇಟ್ಟಿದ್ದು, ಹಲವು ಬಾರಿ ಲಂಚಕ್ಕಾಗಿ ಪೀಡಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗುತ್ತಿಗೆದಾರ ಸುನೀಲ್ ಕಾರವಾರ ಎಸಿಬಿ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ದೂರು ಹಿನ್ನೆಲೆಯಲ್ಲಿ ಇಂದು ಡಿವೈಎಸ್ ಪಿ ವಿರೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಬೆಳಗಾವಿ ಮಹಾನಗರ ಪಾಲಿಕೆ: ಮೇಯರ್ ಸ್ಥಾನ ಸಾಮಾನ್ಯ, ಉಪ ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ