Latest

ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ

ಪ್ರಗತಿವಾಹಿನಿ ಸುದ್ದಿ; ಶಿರಸಿ: ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.

ಇಲ್ಲಿನ ಕಸ್ತೂರಬಾ ನಗರದ ಸಾಲುಮರದ ತಿಮ್ಮಕ್ಕ ಉದ್ಯಾನವನ ಪಕ್ಕದ ಖುಲ್ಲಾ ಜಾಗದಲ್ಲಿ ಗಾಂಜಾ ಮಾಧಕ ವಸ್ತುವನ್ನು ಅಕ್ರಮವಾಗಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಶಿರಸಿ ಮಾರುಕಟ್ಟೆ ಠಾಣೆ ಪೊಲೀಸರು ಆರೋಪಿಗಳಾದ ಮಹ್ಮದ್ ಮೋಸಿನ್ ತಂದೆ ನಜೀರ್ ಅಹ್ಮದ್ ಶೇಖ್, ಮಂಜುನಾಥ ಅಲಿಯಾಸ್ ಮಿಂಟಾ ತಂದೆ ಮಾರುತಿ ಪೂಜಾರಿಯನ್ನು ಬಂಧಿಸಿದ್ದಾರೆ.

ಬಂಧಿತರಿಂದ ಸುಮಾರು 10 ಸಾವಿರ ರೂ. ಮೌಲ್ಯದ 266 ಗ್ರಾಂ ತೂಕದ ಗಾಂಜಾ, ಕೃತ್ಯಕ್ಕೆ ಬಳಸಲಾದ ಹೊಂಡಾ ಆಕ್ಟಿವ್ ಬೈಕ್, 1000 ರೂ ನಗದು, 2 ಮೊಬೈಲ್ ಫೊನ್ ಗಳನ್ನು ಜಪ್ತಿ ಮಾಡಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button