Karnataka News

*ರಿಕ್ಕಿ ರೈ ಮೇಲೆ ಫೈರಿಂಗ್ ಪ್ರಕರಣ: ನಾಲ್ವರ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ, ಉದ್ಯಮಿ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ರಿಕ್ಕಿ ರೈ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ಈ ನಡುವೆ ರಿಕ್ಕಿ ರೈ ಕಾರು ಚಾಲಕ ಬಸವರಾಜ್ ಬಿಡಡಿ ಠಾಣೆಯಲ್ಲಿ ದೂರು ನೀಡಿದ್ದು, ಗುಂಡಿನ ದಾಳಿ ಪ್ರಕರಣ ಸಂಬಂಧ ಮುತ್ತಪ್ಪ ರೈ ಎರಡನೇ ಪತ್ನಿ ಸೇರಿ ನಾಲ್ವರ ವಿರುದ್ಧ ಎಫ್ ಐ ಆರ್ ದಾಖಲಿದೆ.

ರಾಕೇಶ್ ಪಲ್ಲಿ, ಅನುರಾಧ, ನಿತೇಶ್ ಶೆಟ್ಟಿ ಹಾಗೂ ವೈದ್ಯನಾಥ್ ಎಂಬುವವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಿಎನ್ ಎಸ್ 109(5) ಹಾಗೂ ಆರ್ಮ್ಸ್ ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ.

Home add -Advt

Related Articles

Back to top button