Kannada NewsKarnataka NewsLatest

*ಎಸ್‌ಐಆರ್ ಕರ್ತವ್ಯದಲ್ಲಿದ್ದ ಶಿಕ್ಷಕಿ ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ಎಸ್‌ಐಆರ್ ಕರ್ತವ್ಯದಲ್ಲಿದ್ದ ಸರ್ಕಾರಿ ಶಾಲೆಯ ಶಿಕ್ಷಕಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರಿನ ಕುರುಬರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಶಮಂತ ಕುಮಾರಿ (44) ಮೃತ ಶಿಕ್ಷಕಿ. ಇತ್ತೀಚೆಗೆ ಬಿಎಲ್ಒ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಇದರ ಬೆನ್ನಲ್ಲೇ ಶುಗರ್, ಬಿಪಿ ಹೆಚ್ಚಾಗಿ ತೀವ್ರ ಜ್ವರ ಬಂದು ಆಸ್ಪತ್ರೆಗೆ ದಾಖಲಾಗಿದ್ದರು. ಗುರುವಾರ (ಜು.23) ರಾತ್ರಿ ಹೃದಯಾಘಾತವಾಗಿ ನಿಧನರಾಗಿದ್ದಾರೆ.

ಶಮಂತ ಕುಮಾರ್, ಮೇಲಾಧಿಕಾರಿಗಳು ಎಸ್‌ಐಆರ್ ಪ್ರಕ್ರಿಯೆ ಬೇಗ ಬೇಗ ಮುಗಿಸುವಂತೆ ಒತ್ತಡ ಹಾಕುತ್ತಿದ್ದರು. ಈ ಕೆಲಸದಿಂದ ಬಿಡುಗಡೆ ಮಾಡಬಹುದಾ ಎಂದು ಕೇಳಿಕೊಂಡಿದ್ದರು. ಮೇಲಾಧಿಕಾರಿಗಳ ಒತ್ತಡದಿಂದ ಹೃದಯಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ಶಿಕ್ಷಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button