Karnataka NewsLatestPolitics

*ಮನೆ ಮನೆಗೆ ತೆರಳಿ ಮತದಾರರ ಮಾಹಿತಿ ಪರಿಶೀಲಿಸಬೇಕಾದ BLOಗಳು ಕಲ್ಯಾಣ ಮಂಟಪದಲ್ಲಿ ‘ಎಸ್.ಐ.ಆರ್ ಜಾತ್ರೆ’ ಮಾಡುತ್ತಿದ್ದಾರೆ: ಜೆಡಿಎಸ್ ಕಿಡಿ*

ಪ್ರಗತಿವಾಹಿನಿ ಸುದ್ದಿ: ರಾಮನಗರದಲ್ಲಿ ಚುನಾವಣಾ ಆಯೋಗದ ನಿಯಮಗಳು ಸಂಪೂರ್ಣ ಗಾಳಿಗೆ ತೂರಲಾಗಿದೆ ಎಂದು ಜೆಡಿಎಸ್ ಕಿಡಿಕಾರಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದೆ.

Home add -Advt

ಎಸ್ ಐಆರ್ ಪ್ರಕ್ರಿಯೆಯಲ್ಲಿ ಮನೆ ಮನೆಗೆ ತೆರಳಿ ಮತದಾರರ ಮಾಹಿತಿ ಪರಿಶೀಲಿಸಿ ಅರ್ಜಿ ವಿತರಿಸಬೇಕಾದ ಬಿ.ಎಲ್.ಓ. ಅಧಿಕಾರಿಗಳು, ರಾಮನಗರ ಟೌನ್ ನಗರಸಭೆಯ ವಾರ್ಡ್ ನಂ-23, ಟಿಪ್ಪುನಗರದ ಕಲ್ಯಾಣ ಮಂಟಪವೊಂದರಲ್ಲಿ ಎಲ್ಲರನ್ನೂ ಸೇರಿಸಿ ‘ಎಸ್.ಐ.ಆರ್ ಜಾತ್ರೆ’ ಮಾಡುತ್ತಿದ್ದಾರೆ! ಇದು ಪ್ರಜಾಪ್ರಭುತ್ವದ ಅಣಕವಲ್ಲದೇ ಮತ್ತೇನು? ಎಂದು ಜೆಡಿಎಸ್ ಪ್ರಶ್ನಿಸಿದೆ.

ಚುನಾವಣಾ ನಿಯಮಗಳನ್ನು ಉಲ್ಲಂಘಿಸಿ, ತಮ್ಮಿಷ್ಟದಂತೆ ವರ್ತಿಸುತ್ತಿರುವ ಈ ಭ್ರಷ್ಟ ಅಧಿಕಾರಿಗಳ ವಿರುದ್ಧ ರಾಜ್ಯ ಚುನಾವಣಾ ಆಯೋಗದ ಮುಖ್ಯ ಅಧುಕಾರಿಗಳು ತಕ್ಷಣವೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

ಪಾರದರ್ಶಕತೆಗೆ ಹೆಸರಾದ ಚುನಾವಣಾ ಆಯೋಗ, ಕಾನೂನು ಬಾಹಿರವಾಗಿ ನಡೆಯುತ್ತಿರುವ ಇಂತಹ ಅಕ್ರಮಗಳ ವಿರುದ್ಧ ಕ್ರಮ ಜರುಗಿಸಿ, ತಪ್ಪಿತಸ್ಥರನ್ನು ಅಮಾನತುಗೊಳಿಸಬೇಕು ಎಂದು ಜೆಡಿಎಸ್ ಒತ್ತಾಯಿಸಿದೆ.

Related Articles

Back to top button