Kannada NewsKarnataka NewsLatest

*ಸೌಜನ್ಯ ಪ್ರಕರಣಕ್ಕೆ 14 ವರ್ಷಗಳ ಬಳಿಕ ಬಿಗ್ ಟ್ವಿಸ್ಟ್*: *ಮೂವರು ವೈದ್ಯರ ವಿಶೇಷ ತಂಡ ರಚಿಸಿದ ಎಸ್‌ಐಟಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಮೂವರು ವಿಧಿವಿಜ್ಞಾನ ವೈದ್ಯರನ್ನು ಒಳಗೊಂಡ ವಿಶೇಷ ಮೆಡಿಕಲ್ ಬೋರ್ಡ್ ರಚಿಸಿದೆ. ಸುಪ್ರೀಂಕೋರ್ಟ್ ನೀಡಿದ್ದ ಆದೇಶದಂತೆ ಈ ತಂಡವನ್ನು ರಚಿಸಲಾಗಿದ್ದು, ಪ್ರಕರಣದ ತನಿಖೆಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆಯಿದೆ.

ಬೆಂಗಳೂರು, ಹಾವೇರಿ ಮತ್ತು ಬೆಳಗಾವಿ ಜಿಲ್ಲೆಗಳ ಎಫ್‌ಎಸ್‌ಎಲ್ ವೈದ್ಯರು ಈ ತಂಡದಲ್ಲಿದ್ದಾರೆ. ಓರ್ವ ಮಹಿಳಾ ವೈದ್ಯೆ ಹಾಗೂ ಇಬ್ಬರು ಪುರುಷ ವೈದ್ಯರನ್ನು ಒಳಗೊಂಡ ತಂಡವನ್ನು ಎಸ್‌ಐಟಿ ಮುಖ್ಯಸ್ಥ ಚೇತನ್ ಸಿಂಗ್ ರಾಥೋಡ್ ರಚಿಸಿದ್ದಾರೆ.

ಇತ್ತೀಚೆಗೆ ಎಸ್‌ಐಟಿ ಅಧಿಕಾರಿಗಳು ಸೌಜನ್ಯ ಮೃತದೇಹ ಪತ್ತೆಯಾಗಿದ್ದ ಮಣ್ಣಸಂಕದ ಕಾಡಿಗೆ ಭೇಟಿ ನೀಡಿದ್ದರು. ಸುಮಾರು 14 ವರ್ಷಗಳ ಹಿಂದಿನ ಘಟನೆಯ ಕುರಿತು ಸ್ಥಳದಲ್ಲೇ ಮರುಸೃಷ್ಟಿ ಕಾರ್ಯಾಚರಣೆ ನಡೆಸಲಾಗಿತ್ತು. ಎಸ್‌ಐಟಿ ತನಿಖಾಧಿಕಾರಿಗಳ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಎಫ್‌ಎಸ್‌ಎಲ್ ಸಿಬ್ಬಂದಿಯೂ ಭಾಗವಹಿಸಿದ್ದರು.

ಈ ವೇಳೆ ಸೌಜನ್ಯ ಅವರ ಮೃತದೇಹ ಪತ್ತೆಯಾಗಿದ್ದ ನಿಖರ ಸ್ಥಳವನ್ನು ಕುಟುಂಬಸ್ಥರು ಅಧಿಕಾರಿಗಳಿಗೆ ತೋರಿಸಿದ್ದರು. ಇದೀಗ ಸುಪ್ರೀಂಕೋರ್ಟ್ ಆದೇಶದಂತೆ ವೈದ್ಯಕೀಯ ತಜ್ಞರ ತಂಡ ರಚನೆಯಾಗಿರುವುದು ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ.

Related Articles

Back to top button