
ಪ್ರಗತಿವಾಹಿನಿ ಸುದ್ದಿ: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದ ಬೆನ್ನಲ್ಲೇ ಎಸ್ ಐಟಿ ಅಧಿಕಾರಿಗಳ ತಂಡ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಆಗಮಿಸಿ, ರೇವಣ್ಣರಿಗಾಗಿ ಶೋಧ ನ್ಡೆಸಿದೆ.
ಹೆಚ್.ಡಿ.ರೇವಣ್ಣ, ಹೆಚ್.ಡಿ.ದೇವೇಗೌಡ ಅವರ ಬೆಂಗಳೂರಿನ ಪದ್ಮನಾಭನಗರದ ನಿವಾಸದಲ್ಲಿರುವ ಬಗ್ಗೆ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ, ಕೋರ್ಟ್ ಆದೇಶ ಹೊರಬೀಳುತ್ತಿದ್ದಂತೆಯೇ ಎರಡು ವಾಹನಗಳಲ್ಲಿ ಆಗಮಿಸಿದ ಎಸ್ ಐಟಿ 10 ಅಧಿಕಾರಿಗಳು ದೇವೇಗೌಡರ ಪದ್ಮನಾಭನಗ ನಿವಾಸಕ್ಕೆ ತೆರಳಿದ್ದು, ರೇವಣ್ಣ ಅವರಿಗಾಗಿ ಹುಡುಕಾಟ ನಡೆಸಿದ್ದಾರೆ.
ಕೆಲವೇ ಕ್ಷಣಗಳಲ್ಲಿ ಶಾಸಕ ಹೆಚ್.ಡಿ.ರೇವಣ್ಣ ಬಂಧನವಾಗುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ