Belagavi NewsBelgaum NewsKannada NewsKarnataka News

*ಅದ್ಧೂರಿಯಾಗಿ ಜರುಗಿದ ಶಿವಶರಣ ಹೂಗಾರ ಮಾದಯ್ಯನವರ ಜಯಂತಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲಾ ಹೂಗಾರ, ಗುರವ, ಜೀರ ಮತ್ತು ಪೂಜಾರ ಸೇವಾ ಸಂಘದ ಜಿಲ್ಲಾ ಘಟದ ವತಿಯಿಂದ ಬಸವಾದಿ ಶಿವಶರಣ ಹೂಗಾರ ಮಾದಯ್ಯನವರ ಜಯಂತೋತ್ಸವ ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. 

ಇಂದು ನಗರದ ಚೆನ್ನಮ್ಮ ವೃತ್ತದಲ್ಲಿ ಬಸವಾದಿ ಶಿವಶರಣ ಹೂಗಾರ ಮಾದಯ್ಯನವರ ಫೋಟೊಗೆ ಪೂಜೆ ಸಲ್ಲಿಸುವ ಮೂಲಕ ಅದ್ದೂರಿ ಮೆರವಣಿಗೆ ನಡೆಸಲಾಯಿತು. ಚೆನ್ನಮ್ಮ ವೃತ್ತದಿಂದ ಆರಂಭವಾದ ಮೆರವಣಿಗೆಯು ಕೊಲ್ಹಾಪೂರ ವೃತ್ತದ ಮೂಲಕ ಸಾಗಿ, ಕುಮಾರಗಂಧರ್ವ ರಂಗಂಮದಿರಕ್ಕೆ ಹೋಗಿ ಸೇರಿತು.

ಈ ವೇಳೆ ದಿವ್ಯ ಸಾನಿಧ್ಯವನ್ನು ನಿಡಸೋಸಿ ಮಠದ ಪಂಚಮ ಶಿವಲಿಂಗೇಶ್ವರ ಜಗದ್ಗುರು, ಸಂಸದ ಈರಣ್ಣ ಕಡಾಡಿ, ಮಾಜಿ ಶಾಸಕರಾದ ಅನಿಲ ಬೆನಕೆ, ಸಂಜಯ ಪಾಟೀಲ್, ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಸೇರಿದಂತೆ ಅನೇಕರು ಇದ್ದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button