National

*ಮರಕ್ಕೆ ಕಾರು ಡಿಕ್ಕಿ: ಆರು ಜನರ ಸಾವು*

ಪ್ರಗತಿವಾಹಿನಿ ಸುದ್ದಿ : ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡದ ಪರಿಣಾಮ ಭಾನುವಾರ ತಡರಾತ್ರಿ ಸಂಭವಿಸಿದ ಅಪಘಾತವೊಂದರಲ್ಲಿ ಆರು ಮಂದಿ ಮೃತಪಟ್ಟಿರುವ ಘಟನೆ ಉತ್ತರಪ್ರದೇಶ ಕುಶಿನಗರದಲ್ಲಿ ಸಂಭವಿಸಿದೆ. 

ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದೇ ಅಪಘಾತಕ್ಕೆ ಕಾರಣವಾಗಿದೆ. ಗಾಯಗೊಂಡವರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ದೇವಗಾನ್ ಗ್ರಾಮದಲ್ಲಿ ಮದುವೆ ಮುಗಿಸಿಕೊಂಡು ತೆರಳುತ್ತಿದ್ದ ಕುಟುಂಬ ಸಾವಿಗೀಡಾಗಿದೆ.

ಸ್ಥಳಕ್ಕೆ ಆಂಬುಲೆನ್ಸ್ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತದೇಹಗಳನ್ನು ಸ್ಥಳೀಯ ಜಿಲ್ಲಾಸ್ಪತ್ರೆಗೆ ಮರಣೋತ್ತರಪರೀಕ್ಷೆಗೆ ರವಾನಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button