
ಪ್ರಗತಿವಾಹಿನಿ ಸುದ್ದಿ
ಛತ್ತೀಸ್ಗಢ : ಹದಿಹರೆಯದ ನೆರೆಯ ಬಾಲಕ, ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಘಟನೆಯ ಬಗೆಗೆ ಸಧ್ಯ ಪೊಲೀಸರು ವಿಚಾರಣೆ ನಡೆಸಿ ಆರೋಪಿ ಬಾಲಕನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಅತ್ಯಾಚಾರದ ದೂರಿನ ಹಿನ್ನೆಲೆಯಲ್ಲಿ ಸಂತ್ರಸ್ತೆಯ ನೆರೆಹೊರೆಯಲ್ಲಿ ವಾಸಿಸುವ 15 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ.
ಪ್ರಕರಣದ ಸಂಬಂಧ “ಎಫ್ಐಆರ್ ನೋಂದಾಯಿಸಲಾಗಿದೆ ಮತ್ತು ಆರೋಪಿಯನ್ನು ಬಾಲಾಪರಾಧಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ” ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಸಂತೋಷ್ ಸಿಂಗ್ ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ