
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುಕಡೋಳ್ಳಿ ಗ್ರಾಮದ ಶ್ರೀ ದುರ್ಗಾದೇವಿ ಮಂದಿರದ ಸ್ಲ್ಯಾಬ್ ಹಾಕುವ ಕಾಮಗಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಗ್ರಾಮಸ್ಥರು ಸೇರಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಅವರು ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಗೆ ತೆರಳಿ ಮಕ್ಕಳ ವಿದ್ಯಾಭ್ಯಾಸದ ಕುರಿತು ಶಿಕ್ಷರರೊಂದಿಗೆ ಚರ್ಚಿಸಿ, ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಗ್ರಾಮದ ಕುಂದುಕೊರತೆಗಳನ್ನು ಸಹ ಆಲಿಸಿದರು.
ಈ ಸಮಯದಲ್ಲಿ ಗ್ರಾಮದ ಹಿರಿಯರು, ಈರಣಗೌಡ ಪಾಟೀಲ, ರಮೇಶ ಮರಕಟ್ಟಿ, ಮಂಜು ಹುಬ್ಬಳ್ಳಿ, ಬಸವರಾಜ ಪಕ್ಕೀರ್, ಎಸ್ ಡಿ ಎಂ ಸಿ ಪದಾಧಿಕಾರಿಗಳು ಗ್ರಾಮ ಪಂಚಾಯಿತಿಯ ಅಧಕ್ಷ, ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಬ್ರಾಹ್ಮಣ ಸಮುದಾಯದ ಅವಹೇಳನ: ಸಿದ್ದರಾಮಯ್ಯರ ಆಪ್ತರ ವಿರುದ್ಧ ದೂರು ದಾಖಲು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ