*//ವರ್ಗಾವಣೆ ದಂಧೆ ವಿಚಾರಕ್ಕೆ ಕಿತ್ತಾಡಿಕೊಂಡಿದ್ದಾರೆ ಎಂದ HDK//*
**ಪ್ರಗತಿವಾಹಿನಿ ಸುದ್ದಿ, ಚನ್ನಪಟ್ಟಣ/ರಾಮನಗರ: ಮೈಸೂರಿನಲ್ಲಿ ಸಚಿವರು ಇನ್ನಿತರರು ಹೊಡೆದಾಡಿಕೊಂಡಿರುವುದು ವರ್ಗಾವಣೆ ದಂಧೆ ವಿಚಾರಕ್ಕೆ ಎನ್ನುವ ಮಾಹಿತಿ ಇದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಚನ್ನಪಟ್ಟಣದ ಪ್ರಚಾರದ ನಡುವೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು; ವರ್ಗಾವಣೆ ದಂಧೆ ವಿಚಾರಕ್ಕೆ ಕಿತ್ತಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಇದೆ. ವರ್ಗಾವಣೆ ವ್ಯವಹಾರಕ್ಕೆ ಅವರು ಕಿತ್ತಾಡಿಕೊಂಡಿದ್ದಾರೆ. ಇನ್ನೂ ಸ್ಪಷ್ಟವಾಗಿ ಹೇಳುವುದಾದರೆ ಹಂಚಿಕೆ ವಿಚಾರಕ್ಕೆ ಹೊಡೆದಾಡಿಕೊಂಡಿದ್ದಾರೆ. ಒಬ್ಬ ಮಂತ್ರಿಯನ್ನು ಬಹಿರಂಗವಾಗಿ ಹೊಡೆಯುತ್ತಾರೆ ಎಂದರೆ ಈ ರಾಜ್ಯ ಎಲ್ಲಿಗೆ ಬಂದಿದೆ? ಎಂಬುದನ್ನು ಗಮನಿಸಬೇಕು ಎಂದು ಕುಮಾರಸ್ವಾಮಿ ಅವರು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ