CrimeKannada NewsLatestNational

*ಸ್ಲೀಪರ್ ಬಸ್ ನಲ್ಲಿಯೇ 16 ವರ್ಷದ ಬಾಲಕಿಯ ಮೇಲೆ ಗ್ಯಾಂಗ್ ರೇಪ್*

ಚಾಲಕ, ಕಂಡಕ್ಟರ್ ನಿಂದಲೇ ಕೃತ್ಯ

Home add -Advt


ಪ್ರಗತಿವಾಹಿನಿ ಸುದ್ದಿ: ಸ್ಲೀಪರ್ ಬಸ್ ನಲ್ಲಿಯೇ 16 ವರ್ಷದ ಬಾಲಕಿಯ ಮೇಲೆ ಚಾಲಕ ಹಾಗೂ ಕಂಡಕ್ಟರ್ ಸಾಮೂಹಿಕ ಅತ್ಯಾಚಾರವೆಸಗಿರುವ ಘೋರ ಘಟನೆ ನಡೆದಿದೆ.

ಸಂತ್ರಸ್ತೆ ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯ ನಿವಾಸಿಯಾಗಿದ್ದು, 11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆಗಸ್ಟ್ 4ರಂದು ಕುಟುಂಬದವರೊಂದಿಗೆ ಉಂಟಾದ ಮನಸ್ತಾಪದ ಹಿನ್ನೆಲೆಯಲ್ಲಿ ಬಾಲಕಿ ಯಾರಿಗೂ ತಿಳಿಸದೆ ಮನೆಯಿಂದ ಹೊರಟಿದ್ದಳು. ನೋಯ್ಡಾದಲ್ಲಿರುವ ತನ್ನ ಸಂಬಂಧಿಕರನ್ನು ಭೇಟಿಯಾಗಲು ಆಕೆ ತೆರಳುತ್ತಿದ್ದಳು. ಭಾರಿ ಮಳೆ ಹಾಗೂ ಕತ್ತಲಿನ ಕಾರಣದಿಂದಾಗಿ ದಾರಿ ತಪ್ಪಿದ ಬಾಲಕಿ ತಪ್ಪಾಗಿ ಪರಿಚೌಕ್‌ನಲ್ಲಿ ಇಳಿದಿದ್ದಳು.

ಈ ವೇಳೆ ಖಾಲಿ ಸ್ಲೀಪರ್ ಬಸ್‌ವೊಂದು ಅಲ್ಲಿಂದ ಹಾದುಹೋಗುತ್ತಿತ್ತು. ಭಾರಿ ಮಳೆಯಲ್ಲಿ ಸಿಲುಕಿದ್ದ ಬಾಲಕಿ ಸಹಾಯಕ್ಕಾಗಿ ಬಸ್ ನಿಲ್ಲಿಸುವಂತೆ ಕೈ ಸನ್ನೆ ಮಾಡಿದ್ದಾಳೆ. ಚಾಲಕ ಮತ್ತು ಕಂಡಕ್ಟರ್ ಬಸ್ ನಿಲ್ಲಿಸಿ, ಅದು ನೋಯ್ಡಾ ಸೆಕ್ಟರ್-63ಕ್ಕೆ ತೆರಳುತ್ತಿದೆ ಎಂದು ಹೇಳಿ ಆಕೆಯನ್ನು ಬಸ್‌ಗೆ ಹತ್ತಿಸಿಕೊಂಡಿದ್ದಾರೆ. ಬಸ್ ಚಲಿಸಲು ಆರಂಭಿಸಿದ ಕೆಲವೇ ಸಮಯದಲ್ಲಿ ಕಂಡಕ್ಟರ್ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಲು ಆರಂಭಿಸಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಚಾಲಕ ಮತ್ತು ಕಂಡಕ್ಟರ್ ಇಬ್ಬರೂ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿ ಪ್ರತಿರೋಧ ವ್ಯಕ್ತಪಡಿಸಿದಾಗ ಆರೋಪಿಗಳು ಆಕೆಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು.

ಕೃತ್ಯದ ಬಳಿಕ ಆರೋಪಿಗಳು ಬಾಲಕಿಯನ್ನು ಸುಮಾರು 47 ಕಿಲೋಮೀಟರ್ ದೂರ ಕರೆದೊಯ್ದು ಬಳಿಕ ಕಾಶ್ಮೀರಿ ಗೇಟ್ ಬಸ್ ಟರ್ಮಿನಲ್ ಸಮೀಪದ ರಿಂಗ್ ರೋಡ್ ಬಳಿ ಬಿಟ್ಟು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ದೂರಿನ ಮೇರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಚಾಲಕ ಕುಲದೀಪ್ ಹಾಗೂ ಕಂಡಕ್ಟರ್ ಸಂದೀಪ್‌ನನ್ನು ಬಂಧಿಸಲಾಗಿದೆ.

Related Articles

Back to top button