ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಆಯ್ಕೆಯಾಗಿರುವ ಬೆಳಗಾವಿಯಲ್ಲಿ ಈಗ ಎಲ್ಲಿ ನೋಡಿದರಲ್ಲಿ ಕಾಮಗಾರಿಗಳ ಭರಾಟೆ.
ಜೂನ್ ಹೊತ್ತಿಗೆ ಮೊದಲ ಹಂತಹ ಬಹುತೇಕ ಕಾಮಗಾರಿಗಳನ್ನು ಪೂರ್ಣಗೊಳಿಸಲು ಮುಂದಾಗಿರುವ ಸ್ಮಾರ್ಟ್ ಸಿಟಿ ಸ್ಪೆಷಲ್ ಪರ್ಪಸ್ ವೆಹಿಕಲ್, ಒಂದೇ ಬಾರಿಗೆ ಎಲ್ಲೆಡೆ ಕೆಲಸ ನಡೆಸುತ್ತಿದೆ.
ರಸ್ತೆ ಕಾಮಗಾರಿಗಳು ಬಹಪಾಲು ಮುಕ್ತಾಯದ ಹಂತದಲ್ಲಿದೆ. ಕಮಾಂಡ್ ಆಂಡ್ ಕಂಟ್ರೋಲ್ ಸೆಂಟರ್, ಮಲ್ಟಿ ಸ್ಪೆಷಾಲಿಟಿ ಹೆರಿಗೆ ಆಸ್ಪತ್ರೆ, ಸ್ಮಾರ್ಟ್ ಪೋಲ್, ಎಲ್ಇಡಿ ಬಲ್ಬ್ ಅಳವಡಿಕೆ ಸೇರಿದಂತೆ ವಿವಿಧ ಕಾಮಗಾರಿಗಳು ನಡೆದಿವೆ.
ಆರಂಭದಲ್ಲಿ ಭಾರಿ ಹಿಂದಿದ್ದ ಸ್ಮಾರ್ಟ್ ಸಿಟಿ ಯೋಜನೆ ಈಗ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಉತ್ತಮ ಸ್ಥಾನ ಕಾಯ್ದುಕೊಳ್ಳುವತ್ತ ಮುನ್ನಡೆದಿದೆ. ಬೇರೆ ನಗರಗಳಿಗೆ ಹೋಲಿಸಿದರೆ ಬೆಳಗಾವಿ ಸ್ಮಾರ್ಟ್ ಸಿಟಿಯಲ್ಲಿ ಯೋಜನೆಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಪ್ರಗತಿ ಅಂಕೆ ಸಂಖ್ಯೆಯಲ್ಲಿ ಹಿಂದಿರುವಂತೆ ಕಾಣುತ್ತಿದೆ.
ರಾಜ್ಯದ ನೂತನ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಶನಿವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗಾವಿಯ ಸ್ಮಾರ್ಟ್ ಸಿಟಿ ಯೋಜನೆಯ ಪ್ರಗತಿ ಪರಿಶೀಲಿಸಲಿರುವ ಸಚಿವರು ನಗರ ಪ್ರದಕ್ಷಿಣೆ ಹಾಕಲಿದ್ದಾರೆ.
ಬೆಳಗ್ಗೆ 9.30ಕ್ಕೆ ಬೆಳಗಾವಿಗೆ ಆಗಮಿಸುವ ಸಚಿವರು, ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸುವರು. 11 ಗಂಟೆಗೆ ಮಹಾನಗರ ಪಾಲಿಕೆಯಲ್ಲಿ ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಯೋಜನೆ ಕುರಿತು ಪರಿಶೀಲನಾ ಸಭೆ ನಡೆಸುವರು. ನಂತರ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳ ವೀಕ್ಷಣೆ ನಡೆಸುವರು.
ಸಂಜೆ 4 ಗಂಟೆಗೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ