Belagavi NewsBelgaum NewsKannada NewsKarnataka NewsNational

*ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ: ಡಿಸಿಪಿ ಸ್ನೇಹಾ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾದಕ ವಸ್ತುಗಳ ವ್ಯಸನದಿಂದ ಆರೋಗ್ಯ ಹಾಳಾಗುತ್ತದೆ. ಸಮಾಜದಲ್ಲಿ ಸುಮಾರು ಅಪರಾಧಗಳು ಮದ್ಯಪಾನ ಮಾಡಿದ ಬಳಿಕ ಆಗುತ್ತಿವೆ. ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ ಎಂದು ಡಿಸಿಪಿ ಸ್ನೇಹಾ ಪಿ.ವಿ.ಹೇಳಿದರು.

ಗುರುವಾರ ಗಂಧರ್ವ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಬೆಳಗಾವಿ ಮಹಾನಗರ ಪಾಲಿಕೆಯ ಸಹಯೋಗದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನದ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. 

ಸದೃಢ ಸಮಾಜ ನಿರ್ಮಾಣ ಮಾಡುವುದರಲ್ಲಿ ಯುವಕರ ಪಾತ್ರ ಮುಖ್ಯವಾಗಿದೆ. ನಮ್ಮ ದೇಶದ ಉದ್ಧಾರಕ್ಕೆ ತಂಬಾಕು ಹಾಗೂ ಮದ್ಯ ಸೇರಿದಂತೆ ಮಾದಕ ವಸ್ತುಗಳ ಸೇವನೆಗೆ ಬಲಿಯಾಗಬಾರದು. ಮಾದಕ ವಸ್ತುಗಳ ಸೇವನೆಗೆ ನೀಡಿದರೂ ಅದಕ್ಕೆ ಹೆಚ್ಚು ದಾಸರಾಗುತ್ತಿರುವುದು ಕಳವಳಕಾರಿ ಸಂಗತಿ ಎಂದರು.

ಯುವಕರಿಗೆ ಸಮಾಜ ಸುಧಾರಣೆ ಮಾಡುವ ಶಕ್ತಿ ಇದೆ‌. ಪರಿಪೂರ್ಣತೆಯ ಕಡೆಗೆ ಹೆಜ್ಜೆ ಇಟ್ಟಾಗ ಮಾತ್ರ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ. ಮಕ್ಕಳ ಮನಸ್ಸಿನಲ್ಲಿ ತಿಳುವಳಿಕೆ ಬರಬೇಕು. ವ್ಯಸನಕ್ಕೆ ಸಾಕಷ್ಟು ಕಾರಣ ಇರುತ್ತದೆ‌. ಅದರಿಂದ ಹೊರ ಬರಲು ಸಾಧ್ಯವಿಲ್ಲ. ಹೆಚ್ಚು ಉತ್ತಮ ಅಭ್ಯಾಸದ ಚಟವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಸಮಾಜಕ್ಕೆ ಉಪಯೋಯವಾಗುವ ಕೆಲಸ ಕಾರ್ಯ ಮಾಡಬೇಕೆಂದು ಕರೆ ನೀಡಿದರು.

ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೋನಕೆರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಗುರುನಾಥ್ ಕಡಬೂರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

------WebKitFormBoundaryGwOsuT7E1HFa2LS����

Related Articles

Back to top button