Kannada NewsKarnataka NewsLatest
*ವಿದ್ಯಾರ್ಥಿನಿಗೆ ನಾಗರಹಾವು ಕಡಿತ: ಬಾಯಿಯಿಂದ ವಿಷ ತೆಗೆಯಲು ಯತ್ನಿಸಿದ ಶಿಕ್ಷಕನ ಸ್ಥಿತಿಯೂ ಗಂಭೀರ*

ಪ್ರಗತಿವಾಹಿನಿ ಸುದ್ದಿ: ನಾಗರಹಾವು ಕಡಿತಕ್ಕೊಳಗಾಗಿದ್ದ ಒಂದನೇ ತರಗತಿಯ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಚಿತ್ರದುರ್ಗ ತಾಲೂಕಿನ ಹುಣಸೇಕಟ್ಟೆ ಗ್ರಾಮದಲ್ಲಿ ನಡೆದಿದೆ.
ಸೃಷ್ಟಿ(6) ಹಾವು ಕಡಿತಕ್ಕೊಳಗಾದ ವಿದ್ಯಾರ್ಥಿನಿ. ವಿದ್ಯಾರ್ಥಿನಿ ಶಾಲಾ ಆವರಣದಲ್ಲಿ ಕುಳಿತಿದ್ದಾಗ ನಾಗರಹಾವು ಕಡಿದಿದೆ. ಈ ವೇಳೆ ಶಾಲಾ ಶಿಕ್ಷಕ ರವಿಶಂಕರ್ ಬಾಯಿಂದ ವಿಷ ತೆಗೆಯಲು ಯತ್ನಿಸಿದ್ದಾರೆ. ಅವರ ಸ್ಥಿತಿ ಕೂಡ ಗಂಭೀರವಾಗಿದ್ದು, ಸದ್ಯ ಅಸ್ವಸ್ಥಗೊಂಡ ಸೃಷ್ಠಿಯನ್ನು ಖಾಸಗಿ ಆಸ್ಪತ್ರೆಗೆ ಮತ್ತು ರವಿಶಂಕರ್ರನ್ನು ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




