Karnataka News

*ಸ್ನೇಹಮಯಿ ಕೃಷ್ಣಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದೂರು ನೀಡುವ ಮೂಲಕ ಭಾರಿ ಸುದ್ದಿಯಾಗಿದ್ದ ಆರ್ ಟಿ ಐ ಕಾರ್ಯಕರ್ತ ಸ್ನೇಹಮಯಿಕೃಷ್ಣ ಗೆ ಕೋರ್ಟ್ ಜೈಲು ಶಿಕ್ಷೆ ವಿಧಿಸಿದೆ.

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆಸ್ನೇಹಮಯಿ ಕೃಷ್ಣ ಅವರಿಗೆ ಮೈಸೂರು ಜೆ ಎಂ ಎಫ್ ಸಿ ಕೋರ್ಟ್ 6 ತಿಂಗಳ ಜೈಲುಶಿಕ್ಷೆ ವಿಧಿಸಿದೆ.

ಪತ್ರಿಕೆ ನಡೆಸಲು ಹಾಗೂ ಗೃಹೋಪಯೋಗಕ್ಕಾಗಿ ಲಲಿತಾದ್ರಿಪುರದ ಕುಮಾರ್ ಎಂಬುವವರಿಂದ ಸ್ನೇಹಮಯಿ ಕೃಷ್ಣ 2015ರಲ್ಲಿ ಸಾಲ ಪಡೆದಿದ್ದರು. ಅದಕ್ಕೆ ಪ್ರತಿಯಾಗಿ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ಚೆಕ್ ಬೌನ್ಸ್ ಕೇಸ್ ದಾಖಲಾಗಿತ್ತು. ಇದೀಗ ಈ ಕೇಸ್ ನಲ್ಲಿ ಕೋರ್ಟ್ ಜೈಲುಶಿಕ್ಷೆ ನೀಡಿ ಆದೇಶ ಹೊರಡಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button