
ಪ್ರಗತಿವಾಹಿನಿ ಸುದ್ದಿ: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪಾತ್ರವೂ ಇದೆ ಎಂದು ರಾಜ್ಯಪಾಲರಿಗೆ ದೂರು ನೀಡಿದ್ದ ಆರ್ ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರು ಪೊಲೀಸ್ ಆಯುಕ್ತರಿಗೆ ಕಾಂಗ್ರೆಸ್ ನಾಯಕ ಎಂ.ಲಕ್ಷ್ಮಣ್ ದೂರು ನೀಡಿದ್ದಾರೆ.
ಸ್ನೇಹಮಯಿ ಕೃಷ್ಣ ವಿರುದ್ಧ ರಾಜ್ಯದ ಹಲವೆಡೆ 17 ಕ್ರಿಮಿನಲ್ ಕೇಸ್ ಗಳು ದಾಖಲಾಗಿವೆ. ಆಸ್ತಿ ವಿಚಾರವಾಗಿ ಹಸ್ತಕ್ಷೇಪ ಮಡಿ ಭೂಮಿ ವಶಪಡಿಸಿಕೊಳ್ಳುವುದು, ನನ್ನನ್ನೂ ಸೇರಿದಂತೆ ನಗರದ ಗಣ್ಯರನ್ನು ಹೆದರಿಸುವ ಕೆಲಸವನ್ನು ಸ್ನೇಹಮಯಿ ಕೃಷ್ಣ ಮಾಡುತ್ತಿದ್ದಾರೆ. ಆರ್ ಟಿಐ ಕಾರ್ಯಕ್ರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.
ಅಲ್ಲದೇ ಸ್ನೇಹಮಯಿ ಕೃಷ್ಣರನ್ನು ಗಡಿಪಾರು ಮಾಡಿ ಗೂಂಡಾಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಮನವಿ ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ