Karnataka NewsLatestPolitics

*ವಿಠಲ ಗೌಡನಿಂದಲೇ ಸೌಜನ್ಯಾ ಹತ್ಯೆ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾನೆಯಲ್ಲಿ ದೂರು ದಾಖಲಾಗಿದೆ.

ಸೌಜನ್ಯಾ ಅತ್ಯಾಚಾರ, ಕೊಲೆ ಮಾಡಿದ್ದು ಆಕೆಯ ಮಾವ ವಿಠಲ ಗೌಡ ಎಂದು ಸ್ನೇಹಮಯಿ ಕೃಷ್ಣ ಹೇಳಿಕೆ ನೀಡದ್ದರು. ಈ ಹಿನ್ನೆಲೆಯಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ವೆಂಕಪ್ಪ ಕೋಟ್ಯಾನ್ ಎಂಬುವವರು ದೂರು ನೀಡಿದ್ದಾರೆ.

ಸೌಜನ್ಯಾ ಸಾವಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ಹೋರಾಟದ ದಾರಿ ತಪ್ಪಿಸಲು ಸ್ನೇಹಮಯಿ ಕೃಷ್ಣ ದುರುದ್ದೇಶದಿಂದ ಆರೋಪ ಮಾಡುತ್ತಿದ್ದಾರೆ. ಸ್ನೇಹಮಯಿ ಕೃಷ್ಣ ವಿರುದ್ಧ ತನಿಖೆ ನಡೆಸುವಂತೆ ಹಾಗೂ ಇದರ ಹಿಂದೆ ಯಾರಿದ್ದಾರೆ ಎಂಬುದನ್ನೂ ಬಹಿರಂಗ ಮಾಡುವಂತೆಯೂ ಒತ್ತಾಯಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button