Belagavi NewsBelgaum News

*ಕುಂಭಮೇಳಕ್ಕೆ ಹೋಗಿದ್ದ ಬೆಳಗಾವಿಯ ಸಾಮಾಜಿಕ ಕಾರ್ಯಕರ್ತ ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕುಂಭಮೇಳಕ್ಕೆ ಹೋಗಿದ್ದ ಬೆಳಗಾವಿಯ ಕ್ಯಾಂಪ್ ಪ್ರದೇಶದ ‌ನಿವಾಸಿ, ಸಾಮಾಜೀಕ ಕಾರ್ಯಕರ್ತ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಫ್ಯಾಸ್ ಫೌಂಡೇಶನ್ ಮೂಲಕ ಪರಿಸರ ಮತ್ತು ಜಲಮೂಲಗಳ ಸಂರಕ್ಷಣೆ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಕಿರಣ್ ಅವರು, ಕಳೆದ ವಾರ ಕುಂಭಮೇಳಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್ಸಾಗುತ್ತಿದ್ದಾಗ ಬುಧವಾರ ಸಂಜೆ ವಾರಾಣಸಿಯಲ್ಲಿ ಹೃದಯಾಘಾತವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅವರ ಮೃತದೇಹವನ್ನು ಶುಕ್ರವಾರ ಬೆಳಗಾವಿಗೆ ತಂದು, ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇವರು ಮಹಾನಗರ ಪಾಲಿಕೆ ಉಪ ಆಯುಕ್ತ ಲಕ್ಷ್ಮೀ ನಿಪ್ಪಾಣಿಕರ್ ಅವರ ಸಹೋದರರಾಗಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ತಾಯಿ ಇದ್ದಾರೆ.

Related Articles

Back to top button