Belagavi NewsBelgaum NewsKarnataka NewsLatestPolitics

*ಸಾಮಾಜಿಕ, ಶೈಕ್ಷಣಿಕ ಗಣತಿ ಮನೆಪಟ್ಟಿ ಅಂಟಿಸುವ ಕಾರ್ಯಕ್ಕೆ ಸಹಕರಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ಎಲ್ಲ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕಾರ್ಯವನ್ನು ಕೈಗೊಳ್ಳಲಾಗುತ್ತಿದ್ದು, ಈ ಸಮೀಕ್ಷೆಯ ಕಾರ್ಯದಲ್ಲಿ ಮನೆ ಪಟ್ಟಿ (ಹೌಸ್ ಲಿಸ್ಟಿಂಗ್ ಎಕ್ಷರ್ಸೈಜ್) ಮಾಡಲಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಹೆಸ್ಕಾಂ ಅಧಿಕಾರಿಗಳು ಬುಧವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಬೆಳಗಾವಿಯ ನಿವಾಸಕ್ಕೆ ಭೇಟಿ ನೀಡಿ, ಸಮೀಕ್ಷೆಯ ಭಾಗವಾಗಿ ಮನೆಗಳಿಗೆ ಅಂಟಿಸಬೇಕಿರುವ ಸ್ಟಿಕರ್ ಕುರಿತು ಮಾಹಿತಿಯನ್ನು ನೀಡಿದರು.

ರಾಜ್ಯದ ಪ್ರತಿ ಮನೆಗೆ ಸಿಬ್ಬಂದಿ ಭೇಟಿ ನೀಡಿ ಸ್ಟಿಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳಲಿದ್ದಾರೆ. ಸಮೀಕ್ಷೆಯ ವೇಳೆ ಅವರಿಗೆ ಸೂಕ್ತ ಮಾಹಿತಿ ನೀಡಿ ಸಮೀಕ್ಷೆಯನ್ನು ಯಶಸ್ವಿಗೊಳಿಸಬೇಕು ಎಂದು ಸಚಿವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಈ ವೇಳೆ ಹೆಸ್ಕಾಂ ನ ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಅಶ್ವಿನ್ ಶಿಂಧೆ, ಶೀತಲ್ ಸನದಿ, ಶಂಕರ ಕದಂ, ಸೆಕ್ಷನ್ ಆಫೀಸರ್ ಹಂದಿಗುಂದ್, ಕಾಮತ್, ಛಾಯಾ, ಸಂದೀಪ್, ಮಾರುತಿ ಮುಂತಾದವರು ಉಪಸ್ಥಿತರಿದ್ದರು.

Home add -Advt

Related Articles

Back to top button