ಪ್ರಗತಿವಾಹಿನಿ ಸುದ್ದಿ; ತಿರುವಂತಪುರಂ: ಸಾಮಾಜಿಕ ಜಾಲತಾಣಗಳ ಮೂಲಕ ಅವಮಾನವಾಗುವ ಸಂದೇಶ, ಬೆದರಿಕೆ, ನಿಂದನೆ ಮಾಡಿದರೆ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಕೇರಳ ಸರ್ಕಾರ ಮುಂದಾಗಿದೆ.
ಸೋಷಿಯಲ್ ಮೀಡಿಯಾ ಮೂಲಕ ಬೆದರಿಕೆ ಹಾಕುವುದು, ನಿಂದನೆ ಮಾಡುವಂತಹ ಘಟನೆ ನಡೆದರೆ 5 ವರ್ಷ ಜೈಲುಶಿಕ್ಷೆ ವಿಧಿಸುವುದಾಗಿ ಕೇರಳ ಸರ್ಕಾರ ಹೇಳಿದೆ. ಈ ಕುರಿತು ಹೊಸ ಕಾನೂನು ಜಾರಿಗೆ ತರಲು ಮುಂದಾಗಿರುವ ಸಿಎಂ ಪಿಣರಾಯಿ ವಿಜಯನ್ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಿದೆ.
ಈ ನಿಟ್ಟಿನಲ್ಲಿ ಕೇರಳ ಸರ್ಕಾರ ಪೊಲೀಸ್ ಕಾಯ್ದೆಗೆ ಸೆಕ್ಷನ್ 118(ಎ) ಸೇರಿಸಿದ್ದು, ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಕಾಯ್ದೆಗೆ ಸಹಿ ಹಾಕಿದ್ದಾರೆ. ಹೊಸ ಸೆಕ್ಷನ್ ಪ್ರಕಾರ ಯಾವುದೇ ವ್ಯಕ್ತಿ ಬೇರೊಬ್ಬ ವ್ಯಕ್ತಿಗೆ ಸಾಮಾಜಿಕ ಜಾಲತಾಣಗಳ ಬಳಕೆ ಮಾಡಿಕೊಂಡು ಅವಮಾನ ಮಾಡುವಂತಿಲ್ಲ, ಬೆದರಿಕೆ ಹಾಕುವಂತಿಲ್ಲ. ಒಂದುವೇಳೆ ನಿಯಮ ಉಲ್ಲಂಘಿಸಿದರೆ ಅಂತವರಿಗೆ 5 ವರ್ಷ ಜೈಲು ಶಿಕ್ಷೆ ಅಥವಾ 10 ಸಾವಿರ ದಂಡ ವಿಧಿಸಲಾಗುತ್ತದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ