Karnataka News

*ಗಣೇಶ ಮೂರ್ತಿ ವಿಸರ್ಜನೆ ವೇಳೆ ಘೋರ ದುರಂತ: ತಂದೆ, ಮಗ ಸೇರಿ ಮೂವರು ಸಾವು*

ಪ್ರಗತಿವಾಹಿನಿ ಸುದ್ದಿ: ಗ್ರಾಮದಲ್ಲಿ ಕೂರಿಸಿದ್ದ ಗಣೇಶ ಮೂರ್ತಿ ವಿಸರ್ಜನೆ ವೇಳೆ ದುರಂತವೊಂದು ಸಂಭವಿಸಿದ್ದು, ಕೆರೆಯಲ್ಲಿ ಮುಳುಗಿ ತಂದೆ ಮಗ ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತುರವೆಕೆರೆ ತಾಲೂಕಿನ ರಂಗನಹಟ್ಟಿ ಕೆರೆಯಲ್ಲಿ ನಡೆದಿದೆ.

ತಂದೆ ರೇವಣ್ಣ, ಪುತ್ರ ಶರತ್ ಹಾಗೂ ದಯಾನಂದ್ ಮೃತ ದುರ್ದೈವಿಗಳು. ಗಣೇಶ ಮೂರ್ತಿ ವಿಸರ್ಜನೆ ಮಾಡಲು ಕೆರೆಯಲ್ಲಿ ಇಳಿದಿದ್ದಾಗ ನೀರಿನಲ್ಲಿ ಮುಳುಗಿ ಮೂವರು ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ದಂಡಿನಶಿವರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳಿಗಾಗಿ ಕೆರೆಯಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ.


Related Articles

Back to top button