ಸಪ್ರಗತಿವಾಹಿನಿ ಸುದ್ದಿ: ದಾಕಾಲ ಒಂದಿಲ್ಲೊಂದು ರೀತಿಯಲ್ಲಿ ಸುದ್ದಿಯಲ್ಲೇ ಇರುವ ಬಿಗ್ ಬಾಸ್ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಮಾಡಿ ಬಂಧನಕ್ಕಿಡಾಗಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅವರ ಇಬ್ಬರು ಸ್ನೇಹಿತರನ್ನು ತುಮಕೂರಿನ ಮಿಡಿಗೇಶಿ ಪೊಲೀಸರು ಬಧಿಸಿದ್ದಾರೆ.
ವಿನಯ್ ಹಾಗೂ ಪ್ರಜ್ವಲ್ ಬಂಧಿತರು. ವಿನಯ್ ಕ್ಯಾಮರಾ ಮೆನ್ ಆಗಿದ್ದು, ಪ್ರಜ್ವಲ್, ಡ್ರೋನ್ ಪ್ರತಾಪ್ ಗೆ ಸೋಡಿಯಂ ಕೊಡಿಸಿದ್ದ. ಇಬ್ಬರನ್ನು ಬೆಂಗಳೂರಿನಲ್ಲಿ ತಡ ರಾತ್ರಿ ಬಂಧಿಸಲಾಗಿದೆ.
ಡ್ರೋನ್ ಪ್ರತಾಪ್ ಬೆಂಗಳೂರಿನ ಅವೆನ್ಯೂ ರಸ್ತೆಯ ಅಂಗಡಿಯೊಂದರಲ್ಲಿ ಸೋಡಿಯಂ ಖರೀದಿಸಿದ್ದಾಗಿ ತಿಳಿದುಬಂದಿದೆ. ಇನ್ನು ಎಫ್ ಐ ಆರ್ ದಾಖಲಾಗುತ್ತಿದ್ದಂತೆ ಫಾರ್ಮ್ ಹೌಸ್ ಮಾಲೀಕ ಜಿತೇಂದ್ರ ಜೈನ್ ತಲೆ ಮರೆಸಿಕೊಂಡಿದ್ದು, ಅವರಿಗಾಗಿ ಶೋಧ ಕಾರ್ಯ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ