ಪ್ರಗತಿವಾಹಿನಿ ಸುದ್ದಿ, ಮುಧೋಳ – ಕೊರೊನಾ ಸೊಂಕು ಗ್ರಾಮ ಮಟ್ಟದಲ್ಲಿ ವ್ಯಾಪಕವಾಗಿ ಹರುಡುತ್ತಿದ್ದು, ಸ್ವಚ್ಚತೆ ನಮ್ಮ ಮೊದಲ ಆದ್ಯತೆಯಾಗಬೇಕು. ಈ ನಿಟ್ಟಿನಲ್ಲಿ ಬೆಳಗಾವಿ, ಬಾಗಲಕೋಟ ಮತ್ತು ವಿಜಯಪುರ ಜಿಲ್ಲೆಗಳ ಪ್ರತಿ ಗ್ರಾಮ ಪಂಚಾಯತಿಗೆ ಸೊಡಿಯಂ ಹೈಪೋ ಕ್ಲೋರೈಡ್ ದ್ರಾವಣವನ್ನು ಉಚಿತ ವಿತರಿಸಲು ನಿರ್ಧರಿಸಲಾಗಿದೆ ಎಂದು ನಿರಾಣಿ ಉದ್ಯಮ ಸಮೂಹದ ಸಂಸ್ಥಾಪಕ ಅಧ್ಯಕ್ಷ ಹಾಗೂ ಗಣ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟನೆ ನೀಡಿರುವ ಅವರು ಸೊಡಿಯಂ ಹೈಪೊಕ್ಲೋರೈಡ್ ಇದು ಸೊಂಕು ನಿವಾರಕ ದ್ರಾವಣವಾಗಿದ್ದು, ಕೊರೊನಾ ಸೇರದಂತೆ ಯಾವುದೇ ರೀತಿಯ ವೈರಾಣುವಿನ ವಿರುದ್ದ ಹೋರಾಡಲು ಇದನ್ನು ಬಳಸಬಹುದು. ಕೊರೊನಾ ಹಳ್ಳಿಗಳಲ್ಲಿ ತನ್ನ ಕಬಂದ ಬಾಹುಗಳನ್ನು ಚಾಚಿರುವ ಈ ಸಂದರ್ಭದಲ್ಲಿ ಕೊರೊನಾ ಸಮುದಾಯ ಹರಡುವಿಕೆಯನ್ನು ತಪ್ಪಿಸಲು ಸ್ವಚ್ಚತೆಗೆ ಆದ್ಯತೆ ನೀಡಬೇಕು. ಸಾರ್ವಜನಿಕ ಸ್ಥಳಗಳು, ಸರ್ಕಾರಿ ಕಚೇರಿಗಳು, ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಸಂತೆ ಕಟ್ಟೆಗಳು ಇಲ್ಲ ಕಡೆಯು ಸ್ಯಾನಿಟೈಸ್ ಮಾಡುವುದು ಅಗತ್ಯವಾಗಿದೆ. ಈ ಕಾರಣದಿಂದ ನಿರಾಣ ಫೌಂಡೇಶನ್ ವತಿಯಿಂದ ಬಾಗಲಕೋಟ, ಬೆಳಗಾವಿ ಹಾಗೂ ಬಾಗಲಕೋಟ ಜಿಲ್ಲೆಗಳ ಪ್ರತಿ ಪಟ್ಟಣ ಹಾಗೂ ಗ್ರಾಮ ಪಂಚಾಯತಿಗೆ ಸೊಡಿಯಂ ಹೈಪೋ ಕ್ಲೋರೈಡ್ ದ್ರಾವಣವನ್ನು ಉಚಿತವಾಗಿ ವಿತರಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.
ಈ ಸೌಲಭ್ಯವನ್ನು ಪಡೆದುಕೊಳ್ಳುವವರು ಮುಧೋಳದ ನಿರಾಣ ಶುಗರ್ಸ್ ಆವರಣದಲ್ಲಿರುವ ನಿರಾಣ ಫೌಂಡೇಶನ್ ಕಚೇರಿಗೆ ಭೇಟ್ಟಿ ನೀಡಿ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಪೌಂಡೇಶನ್ ಸಿಬ್ಬಂದಿಗಳಾದ ಗಿರೀಶ ಆನಿಖಿಂಡಿ ಹಾಗೂ ಬಸವರಾಜ ಮಾಸಗತ್ತಿ ಅವರನ್ನು ಸಂಪರ್ಕಿಸಬಹುದು ಎಂದು ಮುರುಗೇಶ ನಿರಾಣಿ ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿಗಳಿಬ್ಬರು ಸಸ್ಪೆಂಡ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ