Kannada NewsLatest

ಕರ್ತವ್ಯನಿರತ ಯೋಧ ಸಾವು: ಅಂತಿಮ‌ ನಮನ ಸಲ್ಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ:  ಸಿಯಾಚಿನ್ ಗ್ಲೇಷಿಯರ್ ನಲ್ಲಿ ನಡೆಯುತ್ತಿದ್ದ ಆಪರೇಷನ್ ಮೇಘದೂತ ಕಾರ್ಯಾಚರಣೆ ಸಂದರ್ಭದಲ್ಲಿ ಸಾವನ್ನಪ್ಪಿದ ಮರಾಠಾ ಲಘು ಪದಾತಿದಳದ ಯೋಧ ಕೊಲ್ಲಾಪುರ ಜಿಲ್ಲೆಯ ಜಾಧವ ಪ್ರಶಾಂತ ಶಿವಾಜಿ ಅವರ ಪಾರ್ಥಿವ ಶರೀರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಸೇರಿದಂತೆ ಅನೇಕ ಗಣ್ಯರು ಅಂತಿಮನಮನ ಸಲ್ಲಿಸಿದರು.

ನಗರದ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಭಾನುವಾರ(ಮೇ 29) ಬೆಳಿಗ್ಗೆ ಆಗಮಿಸಿದ ಪಾರ್ಥಿವ ಶರೀರವನ್ನು ಬರಮಾಡಿಕೊಂಡು ಸಕಲ ಸರಕಾರಿ ಗೌರವ ಸಲ್ಲಿಸಲಾಯಿತು.

ಅಂತಿಮ ನಮನ ಸಲ್ಲಿಸಿದ ಬಳಿಕ ಯೋಧನ ಪಾರ್ಥಿವ ಶರೀರವನ್ನು ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರ ಜಿಲ್ಲೆ ಗಡಹಿಂಗ್ಲಜ್ ತಾಲ್ಲೂಕಿನ ಬಸರಗಿ ಬಿ.ಕೆ. ಗ್ರಾಮಕ್ಕೆ ರಸ್ತೆ ಮೂಲಕ ಕಳಿಸಿಕೊಡಲಾಯಿತು.

ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕೂಡ ಪುಷ್ಪಗುಚ್ಛ ಸಮರ್ಪಿಸಿ ಅಂತಿಮ ನಮನ ಸಲ್ಲಿಸಿದರು.
ಡಿಸಿಪಿ ರವೀಂದ್ರ ಗಡಾದಿ, ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಮರಾಠಾ ಲಘುಪದಾತಿ ದಳದ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Home add -Advt

ಅನುಭವ ಮಂಟಪದಲ್ಲಿ ದರ್ಗಾ ನಿರ್ಮಾಣವಾಗಿದೆ; ಶಾಕಿಂಗ್ ಮಾಹಿತಿ ನೀಡಿದ ಶಾಸಕ ಶರಣು ಸಲಗ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button