Belagavi NewsBelgaum NewsKannada NewsKarnataka News

*ಮಲಪ್ರಭಾ ನದಿಯಲ್ಲಿ ಬಾಲಕನ ರಕ್ಷಣೆಗೆ ಹೋಗಿದ್ದ ಸೈನಿಕ: ಇಬ್ಬರೂ ನೀರು ಪಾಲು*

ಪ್ರಗತಿವಾಹಿನಿ ಸುದ್ದಿ: ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ಬಾಲಕನ ರಕ್ಷಣೆಗೆ ಮುಂದಾಗಿದ್ದ ಸೈನಿಕ ಹಾಗೂ ಬಾಲಕ ಇಬ್ಬರು ಮಲಪ್ರಭಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ

ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲೂಕಿನ ಮಣೇರಿ ಗ್ರಾಮದ ಮಲಪ್ರಭಾ ನದಿಯಲ್ಲಿ ಹಂಸನೂರ ಗ್ರಾಮದ ಶೇಖಪ್ಪ ಮುತ್ತಪ್ಪ ಮೂಲಿಮನಿ(15) ಎಂಬಾತ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ಈ ಈ ವೇಳೆ ಈಜು ಬಾರದೆ ಪರದಾಡಿದ್ದಾನೆ. 

Home add -Advt

ಈ ವೇಳೆ ಅದೇ ಮಾರ್ಗದಲ್ಲಿ ಗದಗ ಜಿಲ್ಲೆಯ ರೋಣ ತಾಲೂಕಿನ ಬೆನಹಾಳ ಗ್ರಾಮದ ಸೈನಿಕ ಮಹಾಂತೇಶ ಹೂವಪ್ಪ ಹೊಸಮನಿ (25) ಸಾಗುತ್ತಿದ್ದರು. ಬಾಲಕನ ಕಿರುಚಾಟ ಕೇಳಿ ರಕ್ಷಣೆಗೆಂದು ನದಿಗೆ ಹಾರಿದ್ದಾರೆ.

ಆಗ ಈಜು ಬಾರದ ಶೇಖಪ್ಪ ಭಯದಿಂದ ಮಹಾಂತೇಶ ಅವರ ಕುತ್ತಿಗೆಯನ್ನು ಗಟ್ಟಿಯಾಗಿ ಹಿಡಿದಿದ್ದಾನೆ. ಇದರಿಂದ ಮಹಾಂತೇಶಗೆ ಕೂಡ ಈಜಲು ಸಾಧ್ಯವಾಗದೇ ಇಬ್ಬರು ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಎರಡು ಮೃತದೇಹವನ್ನು ಹೊರ ತೆಗೆದಿದ್ದು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾದಾಮಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related Articles

Back to top button