ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಏಮ್ಸ್ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಎಎಪಿ ಶಾಸಕ ಸೋಮನಾಥ್ ಭಾರ್ತಿಗೆ 2 ವರ್ಷ ಜೈಲುಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.
2016ರಲ್ಲಿ ನಡೆದಿದ್ದ ಈ ಪ್ರಕರಣ ಸಂಬಂಧ ಏಮ್ಸ್ ಭದ್ರತಾ ವಿಭಾಗದ ಮುಖ್ಯಸ್ಥರು ದೂರು ನೀಡಿದ್ದರು.
ನ್ಯಾಯಾಲಯದ ತೀರ್ಪಿನ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಆಮ್ ಆದ್ಮಿ ಪಕ್ಷ ಸೋಮನಾಥ್ ಭಾರ್ತಿಗೆ 2 ವರ್ಷ ಜೈಲುಶಿಕ್ಷೆ ತೀರ್ಪಿನಿಂದ ಅನ್ಯಾಯವಾಗಿದೆ ಎಂದು ಭಾವಿಸುತ್ತೇವೆ. ಆದರೆ ಪಕ್ಷ ನ್ಯಾಯಾಂಗವನ್ನು ಗೌರವಿಸುತ್ತದೆ ಎಂದು ಹೇಳಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ