ಪ್ರಗತಿವಾಹಿನಿ, ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತಕ್ಕೆ ರಾಸಾಯನಿಕ ಪೂರೈಸುವ ಟೆಂಡರ್ ಕಾರ್ಯಾದೇಶ ನೀಡಲು ಸಂಬಂಧಿಸಿದ ಗುತ್ತಿಗೆದಾರರಿಂದ 40 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ ಮಾಡಾಳ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿರುವ ಪ್ರಶಾಂತ್ ಬೆಂಗಳೂರು ಜಲಮಂಡಳಿಯ ಮುಖ್ಯ ಲೆಕ್ಕಾಧಿಕಾರಿಯಾಗಿ ನಿಯೋಜನೆಗೊಂಡಿದ್ದು, ಖಾಸಗಿ ಕಚೇರಿಯಲ್ಲಿ ಗುರುವಾರ ತಮ್ಮ ತಂದೆ ಹೆಸರಿನಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ರಾಸಾಯನಿಕ ಪೂರೈಸುವ ಗುತ್ತಿಗೆದಾರರ ಬಳಿ 81 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದು ತಮ್ಮ ಪುತ್ರನ ಮೂಲಕ ಸ್ವೀಕರಿಸುವ ವೇಳೆ ಅವಾಂತರ ಮಾಡಿಕೊಂಡಿದ್ದಾರೆ.
*ಹರಿಪ್ರಿಯಾ ಎಕ್ಸ್ ಪ್ರೆಸ್ ರೈಲು ಉಗಾರಲ್ಲಿ ನಿಲುಗಡೆ* ಸಂಸದ ಅಣ್ಣಾ ಸಾಹೇಬ ಜೊಲ್ಲೆ ಪ್ರಯತ್ನ*
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ