
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ; ಬೆಳಗಾವಿಯ ಬಿಜೆಪಿ ನಾಯಕಿ ಡಾ. ಸೋನಾಲಿ ಸರ್ನೋಬತ್ ಅವರನ್ನು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ವಿಶೇಷವಾಗಿ, ಬೆಳಗಾವಿ, ಖಾನಾಪುರ ಭಾಗದಲ್ಲಿ ಸೋನಾಲಿ ಅವರು ಸಕ್ರೀಯವಾಗಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಅವರ ಕಾರ್ಯವೈಖರಿ ಗುರುತಿಸಿರುವ ಪಕ್ಷ ಮಹತ್ವದ ಜವಾಬ್ದಾರಿ ನೀಡಿ, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿದೆ.
ಡಾ. ಸೋನಾಲಿ ಅವರು ಈ ಹಿಂದೆ ಜಿಲ್ಲಾ ವಿಭಾಗದಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದರು. ತಮಗೆ ಜವಾಬ್ದಾರಿ ನೀಡಿರುವ ಪಕ್ಷದ ನಾಯಕರಿಗೆ ಡಾ. ಸೋನಾಲಿ ಕೃತಜ್ಞತೆ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ