Kannada NewsKarnataka NewsLatest

ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಳಗಾವಿಗೆ ಆಗಮನ

ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಳಗಾವಿಗೆ ಆಗಮನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ- 

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಜೆ ಆಗಮಿಸಿದ್ದಾರೆ.
ಮುಖ್ಯಮಂತ್ರಿ ಬಿ‌.ಎಸ್‌.ಯಡಿಯೂರಪ್ಪ ಅಮಿತ್ ಶಾ ಅವರನ್ನು ಸ್ವಾಗತಿಸಿದರು.
 ಅಮಿತ್ ಶಾ ಬೆಳಗಾವಿ ಜಿಲ್ಲೆಯ ಪ್ರವಾಹ ಬಾಧಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸುವರು.
ವೈಮಾನಿಕ ಸಮೀಕ್ಷೆ ಬಳಿಕ ರಾಜ್ಯದ ಹಿರಿಯ ಅಧಿಕಾರಿಗಳ ಜತೆಗೆ ವಿಮಾನ ನಿಲ್ದಾಣದ ಸಭಾ ಭವನದಲ್ಲಿ ಸಭೆ ನಡೆಸಲಿದ್ದಾರೆ.
  ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆಯ ಪ್ರಹ್ಲಾದ ಜೋಶಿ, ರೈಲ್ವೆ ಖಾತೆ ರಾಜ್ಯ ಸಚಿವರಾದ ಸುರೇಶ್ ಅಂಗಡಿ,  ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ್ ಕೋರೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಪೊಲೀಸ್ ಆಯುಕ್ತರಾದ ಬಿ.ಎಸ್.ಲೋಕೇಶ್ ಕುಮಾರ್, ಐಜಿಪಿ ಎಚ್.ಜಿ.ರಾಘವೇಂದ್ರ ಸುಹಾಸ್, ಜಿಲ್ಲಾ ಪಂಚಾಯತ ಸಿಇಓ ಡಾ.ರಾಜೇಂದ್ರ ಕೆ.ವಿ. ಮತ್ತಿತರರು ಉಪಸ್ಥಿತರಿದ್ದರು.

Home add -Advt

Related Articles

Back to top button