ಜುಲೈ 13ರಿಂದ ಸ್ವರ್ಣವಲ್ಲೀ ಶ್ರೀಗಳವರ 32ನೇ ಚಾತುರ್ಮಾಸ್ಯ ವೃತ ಸಂಕಲ್ಪ

ಹಸಿರು ಸ್ವಾಮೀಜಿ‌ ಎಂದೇ ಪ್ರಸಿದ್ದರಾದ ಸೋಂದಾ ಸ್ವರ್ಣವಲ್ಲೀ ಮಠಾಧೀಶ ಶ್ರೀಗಂಗಾಧರೇಂದ್ರ‌ ಸರಸ್ವತೀ ಮಹಾಸ್ವಾಮೀಜಿಗಳು ಆಷಾಢ ಪೂರ್ಣಿಮೆ ಬುಧವಾರ ಜು. 13ರಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ತಮ್ಮ 32ನೇ ಚಾತುರ್ಮಾಸ್ಯ ವ್ರತವನ್ನು ಸಂಕಲ್ಪಿಸಲಿದ್ದಾರೆ. ಅದೇ ದಿನ ಚಾತುರ್ಮಾಸ್ಯದುದ್ದಕ್ಕೂ ನಡೆಯುವ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.