
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರು ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಾರ್ಥಿಸಿದ್ದಾರೆ.




